ಕ್ರೀಡೆಯಲ್ಲಿ ಹೊಸ ಅನ್ವೇಷಣೆಯಿಂದ ಯುವ ಪ್ರತಿಭೆಗಳಿಗೆ ಅವಕಾಶ-ಲಾಲಾಜಿ ಆರ್.ಮೆಂಡನ್

ಪಡುಬಿದ್ರಿ: ಇತ್ತೀಚಿನ ದಿನಗಳಲ್ಲಿ ಕ್ರೀಡೆಗಳಲ್ಲಿ ಹೊಸ ಅನ್ವೇಷಣೆಗಳು ನಡೆಯುತಿರುವುದು ಉತ್ತಮ ಬೆಳವಣಿಗೆಯಾಗಿದ್ದು ಯುವ ಪ್ರತಿಭೆಗಳಿಗೆ ಉತ್ತಮ ವೇದಿಕೆಯಾಗಿದೆ ಎಂದು ಶಾಸಕ ಲಾಲಾಜಿ ಆರ್.ಮೆಂಡನ್ ಹೇಳಿದರು.

ಅವರು ಶನಿವಾರ ಪಡುಬಿದ್ರಿಯ ಬೋರ್ಡ್ ಶಾಲಾ ಮೈದಾನದ ಬ್ಯಾಂಡ್ಮಿಂಟನ್ ಕ್ರೀಡಾಂಗಣದಲ್ಲಿ ಪಡುಬಿದ್ರಿ ಬ್ಯಾಡ್ಮಿಂಟ್ ಕ್ಲಬ್ ಆಯೋಜಿಸಿದ “ಪಡುಬಿದ್ರಿ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್-2018″ನ್ನು ಉದ್ಘಾಟಿಸಿ ಮಾತನಾಡಿದರು.
ಕ್ರಿಕೆಟ್,ವಾಲಿಬಾಲ್ ಸಹಿತ ಬ್ಯಾಡ್ಮಿಂಟನ್ ಕ್ರಿಡಾ ಸ್ಪರ್ಧೆಗಳ್ನು ಅಂತರಾಷ್ಟ್ರೀಯ ಗುಣಮಟ್ಟದಲ್ಲಿ ಆಯೋಜಿಸುವ ಮೂಲಕ ಪಡುಬಿದ್ರಿ ಇತರರರಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದೆ ಎಂದವರು ಹೇಳಿದರು.

ಬ್ಯಾಡ್ಮಿಂಟನ್ ಕ್ಲಬ್‍ನ ಅಧ್ಯಕ್ಷ ವೈ. ಸುಕುಮಾರ್ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.

ಪಡುಬಿದ್ರಿ ಸಹಕಾರಿ ಬ್ಯಾಂಕ್‍ನ ಅಧ್ಯಕ್ಷ ವೈ. ಸುಧೀರ್ ಕುಮಾರ್, ಎಸ್.ಪಿ.ಫಯಾಝ್, ಜಿಲ್ಲಾ ಟೆನ್ನಿಸ್‍ಬಾಲ್ ಕ್ರಿಕೆಟ್ ಅಸೋಸಿಯೇಶನ್ ಅಧ್ಯಕ್ಷ ಶರತ್ ಶೆಟ್ಟಿ,ವಿವಿಧ ತಂಡಗಳ ಮಾಲಕರಾದ ಡಾ.ಪ್ರಶಾಂತ್ ಶೆಟ್ಟಿ ಕಾಪು, ನವೀನ್‍ಚಂದ್ರ ಜೆ.ಶೆಟ್ಟಿ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಮಯ್ಯದ್ದಿ, ಪ್ರಶಾಂತ್ ಎರ್ಮಾಳು, ವೈ.ದಾಮೋದರ್, ಶಂಕರ್ ಕಂಚಿನಡ್ಕ,
ಉಪಾಧ್ಯಕ್ಷ ವಿಜಯ್ ಆಚಾರ್ಯ, ಪಂದ್ಯಾಕೂಟದ ಆಯೋಜಕರಾದ ಮಿನ್ನ ಶರೀಫ್, ಪ್ರದೀಪ್ ಆಚಾರ್ಯ ಉಪಸ್ಥಿತರಿದ್ದರು.

ಕಾರ್ಯದರ್ಶಿ ರಮೀಝ್ ಹುಸೈನ್ ಬಿಡ್ಡಿಂಗ್ ಪ್ರಕ್ರಿಯೆ ನಡೆಸಿಕೊಟ್ಟರು.