ಬಪ್ಪನಾಡು ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

ಮೂಲ್ಕಿಯ ಬಪ್ಪನಾಡು ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ ಮಧ್ಯಾಹ್ನ ಸಸಿಹಿತ್ಲು ಶ್ರೀ ಭಗವತಿ ಮತ್ತು ಬಪ್ಪನಾಡು ದುರ್ಗೆಯ ಅಪೂರ್ವ ಸಮಾಗಮದೊಂದಿಗೆ ಧ್ವಜಾರೋಹಣ ನಡೆಯಿತು.ದೇವಳದ ಅನುವಂಶಿಕ ಹಾಗೂ ಆಡಳಿತ ಮೊಕ್ತೇಸರ ಎನ್.ಎಸ್.ಮನೋಹರ್ ಶೆಟ್ಟಿ, ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು, ಕಾರ್ಯ ನಿರ್ವಹಣಾಧಿಕಾರಿ ಜಯಮ್ಮ ಪಿ,ಬ್ರಹ್ಮಕಲಶೋತ್ಸವ ಮತ್ತು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಎಮ್.ನಾರಾಯಣ ಶೆಟ್ಟಿ,ಕಾರ್ಯಾಧ್ಯಕ್ಷ ಶೇಖರ ಶೆಟ್ಟಿ ಕಿಲ್ಪಾಡಿ ಭಂಡಸಾಲೆ, ಧರ್ಮದರ್ಶಿ ಹರಿಕೃಷ್ಣ ಪುನರೂರು,ಡಾ.ಹರಿಶ್ಚಂದ್ರ ಪಿ.ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.