ಮಾದಕ ವಸ್ತುಗಳ ನಿಷೇಧ ಅಗತ್ಯ: ಜಿಪಂ ಸದಸ್ಯ ಶಸಿಕಾಂತ್ ಪಡುಬಿದ್ರಿ

ಮುಕ್ತರಾಗುವುದು ಅಗತ್ಯವಾಗಿದ್ದು, ಮಾದಕ ಪದಾರ್ಥಗಳ ಸೇವನೆ ಮಾಡುವವರಿಗೆ ಪೊಲೀಸರು ಕಠಿಣ ಶಿಕ್ಷೆ ನೀಡುವುದಲ್ಲದೆ, ಮಾದಕ ಪದಾರ್ಥಗಳ ಸರಬರಾಜು ಮಾಡುವ ಮೂಲ ಕಂಡು ಹಿಡಿಯುವಲ್ಲಿ ಸಾರ್ವಜನಿಕರು ಕೈಜೋಡಿಸಬೇಕು ಎಂದು ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಕಾಂತ ಪಡುಬಿದ್ರಿ ಸಲಹೆ ನೀಡಿದರು.
ಹೆಜಮಾಡಿ ಕರಾವಳಿ ಯುವಕ-ಯುವತಿ ವೃಂದ, ಉಡುಪಿ ನೆಹರೂ ಯುವ ಕೇಂದ್ರ ಮತ್ತು ಉಡುಪಿ ದೊಡ್ಡಣಗುಡ್ಡೆ ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ ಸಂಯುಕ್ತವಾಗಿ ಹೆಜಮಾಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಆಯೋಜಿಸಿದ್ದ ವಿಶ್ವ ಮಾದಕ ವ್ಯಸನ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಯುವಕರು ಮಾದಕ ವ್ಯಸನಕ್ಕೆ ಬಲಿಯಾಗುತ್ತಿದ್ದು, ಕರಾವಳಿ ಕಡಲ ತೀರದಲ್ಲಿ ಗುಂಪಾಗಿ ದುಶ್ಚಟಗಳಲ್ಲಿ ತೊಡಗುತ್ತಿರುವ ದೃಶ್ಯ ಕಂಡು ಬರುತ್ತಿವೆÉ. ಯುವಪಡೆ ದುಶ್ಚಟದಿಂದ ದೂರವಿದ್ದಾಗ ಸಮಾಜಕ್ಕೆ ಒಳಿತಾಗಲಿದೆ ಎಂದರು.

ದೈನಂದಿನ ಕೆಲಸ ಕಾರ್ಯಗಳನ್ನು ಶಿಸ್ತುಬದ್ದವಾಗಿ ಮಾಡಬೇಕು. ಮಾದಕ ಪದಾರ್ಥಗಳು ಮಾತ್ರವಲ್ಲ. ಮೊಬೈಲ್‍ನ ದುಶ್ಚಟದಿಂದಲೂ ಯುವ ಸಮುದಾಯ ದೂರವಿರಬೇಕು. ಮಾದಕ ವ್ಯಸನ ವಿರೋಧಿ ದಿನಾಚರಣೆ ಒಂದು ದಿನಕ್ಕೆ ಸೀಮಿತವಾಗಬಾರದು. ಜೀವನದಲ್ಲಿ ವ್ಯಸನ ಮುಕ್ತವಾಗುವ ಬಗ್ಗೆ ಪಣತೊಡಬೇಕಿದೆ.ಇದು ಒಂದು ದಿನದ ಕಾರ್ಯಕ್ರಮವಾಗದೆ ನಿತ್ಯ ಜೀವನದಲ್ಲಿ ಅಳವಡಿಸುಕೊಳ್ಳುವುದು ಅಗತ್ಯವಾಗಿದೆ ಎಂದು ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿದ್ದ ದೊಡ್ಡಣಗುಡ್ಡೆ ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ ಆಡಳಿತಾಧಿಕಾರಿ ಸೌಜನ್ಯ ಶೆಟ್ಟಿ ಕಿವಿಮಾತು ಹೇಳಿದರು.

ಹೆಜಮಾಡಿ ಗ್ರಾಪಂ ಅಧ್ಯಕ್ಷೆ ವಿಶಾಲಾಕ್ಷಿ ಉಮೇಶ್ ಪುತ್ರನ್, ಉಪಾಧ್ಯಕ್ಷ ಸುಧಾಕರ ಕರ್ಕೇರ, ಸದಸ್ಯ ವಾಮನ ಕೋಟ್ಯಾನ್ ನಡಿಕುದ್ರು, ತಾಪಂ ಸದಸ್ಯೆ ರೇಣುಕಾ ಪುತ್ರನ್, ಹರೀಶ್ ಹೆಜಮಾಡಿ, ದೊಡ್ಡಣಗುಡ್ಡೆ ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ ಸಮುದಾಯ ಸಮಾಜ ಕಾರ್ಯಕರ್ತ ಸುರೇಶ್ ಎಸ್. ನಾವೂರು, ಕರಾವಳಿ ಯುವಕ ವೃಂದದ ಅಧ್ಯಕ್ಷ ಅಶೋಕ್ ವಿ.ಕೆ., ಯುವತಿ ವೃಂದದ ಅಧ್ಯಕ್ಷೆ ಪವಿತ್ರಾ ಗಿರೀಶ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ಜಿತೇಂದ್ರ ರಾವ್ ಸ್ವಾಗತಿಸಿದರು. ಸಂಪತ್ ಸನಿಲ್ ಕಾರ್ಯಕ್ರಮ ನಿರ್ವಹಿಸಿದರು. ಶ್ರೇಯಸ್ ವಂದಿಸಿದರು.