ಸಾಹಿತಿ ಹರಿಶ್ಚಂದ್ರ ಪಿ.ಸಾಲ್ಯಾನ್‍ಗೆ ಗೌರವ ಡಾಕ್ಟರೇಟ್

ಮೂಲ್ಕಿ: ಸಾಹಿತಿ,ಜ್ಯೋತಿಷಿ,ಹೊಸ ಅಂಗಣ ಮಾಸ ಪತ್ರಿಕೆಯ ಸಂಪಾದಕ ಮೂಲ್ಕಿ ಕೊಳಚಿಕಂಬಳದ ಹರಿಶ್ಚಂದ್ರ ಪಿ.ಸಾಲ್ಯಾನ್‍ರವರ ಸಾಮಾಜಿಕ ಸೇವೆಯನ್ನು ಗುರುತಿಸಿ ಬೆಂಗಳೂರಿನ ಇಂಡಿಯನ್ ಕೌನ್ಸಿಲ್ ಫಾರ್ ಪ್ರೊಫೆಶನಲ್ ಎಡ್ಯುಕೆ
ೀಶನ್ ಮಿಷನ್ ಸಂಸ್ಥೆಯು ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿ ಗೌರವಿಸಿದೆ.

ಶನಿವಾರದಂದು ಬೆಂಗಳೂರಿನ ವಿಜ್ಞಾನ ಭವನದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು.

ಅವರು ಉಳ್ಳಾಲ,ಮೂಲ್ಕಿ ನಗರ ಪಂಚಾಯಿತಿಗಳಲ್ಲಿ ಮುಖ್ಯಾಧಿಕಾರಿಯಾಗಿದ್ದು,ನಿವೃತ್ತರಾದ ಬಳಿಕ ಹೊಸ ಅಂಗಣ ಮಾಸ ಪತ್ರಿಕೆಯ ಮೂಲಕ ಸಾಹಿತ್ಯದ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದರು.

ನಿರಂತರ ಸಾಮಾಜಿಕ,ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಅವರು,ಮೂಲ್ಕಿಯ ಕೊಳಚಿಕಂಬಳ ಶ್ರೀ ಜಾರಂದಾಯ ದೈವಸ್ಥಾನದ ಗುರಿಕಾರ,ಮೂಲ್ಕಿ ಬಿಲ್ಲವ ಸಂಘದ ಮಾಜಿ ಅಧ್ಯಕ್ಷ,ಮೂಲ್ಕಿಯ ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಯ ಟ್ರಸ್ಟಿ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ.