ಸ್ವಚ್ಛ ಭಾರತ್ ಯೋಜನೆಯಡಿ ಸ್ವಚ್ಛತಾ ಅಭಿಯಾನ

ಪಡುಬಿದ್ರಿ ಸಮೀಪದ ಪಲಿಮಾರು ಗ್ರಾಪಂ ವತಿಯಿಂದ ಪಡುಬಿದ್ರಿ ರೋಟರಿ ಕ್ಲಬ್,ಇನ್ನರ್‍ವೀಲ್ ಕ್ಲಬ್, ಪಲಿಮಾರು ಸರಕಾರಿ ಪ್ರೌಢಶಾಲಾ ಇಂಟರ್ಯಾಕ್ಟ್ ಕ್ಲಬ್ ಮತ್ತು ಪಲಿಮಾರು ಸರಕಾರಿ ಪದವಿ ಪೂರ್ವ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛ ಭಾರತ್ ಯೋಜನೆಯಡಿ ಸ್ವಚ್ಛತಾ ಅಭಿಯಾನ ನಡೆಯಿತು.ಪಲಿಮಾರು ಗ್ರಾಪಂ ಅಧ್ಯಕ್ಷ ಜಿತೇಂದ್ರ ಫುರ್ಟಾಡೋ,ಉಪಾಧ್ಯಕ್ಷೆ ಸುಮಂಗಲಾ ದೇವಾಡಿಗ,ಪಿಡಿಒ ಸತೀಶ್ ಆರ್ಜಿ,ರೋಟರಿ ಅಧ್ಯಕ್ಷ ಗಣೇಶ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.