ಹೆಜಮಾಡಿ ಕೋಡಿ ಕ್ರಿಕೆಟರ್ಸ್ ವತಿಯಿಂದ ಕಿಟ್ ವಿತರಣೆ

ಪಡುಬಿದ್ರಿ: ಹೆಜಮಾಡಿ ಕೋಡಿ ಕ್ರಿಕೆಟರ್ಸ್ ವತಿಯಿಂದ ಹೆಜಮಾಡಿಯ ಆಶಾ ಕಾರ್ಯಕರ್ತೆಯರು ಮತ್ತು ಗ್ರಾಮದ ಸ್ವಚ್ಛತಾ ಸಿಬ್ಬಂದಿಯವರಿಗೆ ರೂ 1500 ಮೌಲ್ಯದ ಆಹಾರ ಕಿಟ್‍ಗಳನ್ನು ವಿತರಿಸಲಾಯಿತು.

ಹೆಜಮಾಡಿ ಕೋಡಿ ಸರಕಾರಿ ಪ್ರೌಢ ಶಾಲಾ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಕಾಪು ಶಾಸಕ ಲಾಲಾಜಿ ಆರ್.ಮೆಂಡನ್ ಕಿಟ್ ವಿತರಿಸಿ ಶುಭ ಹಾರೈಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಹೆಜಮಾಡಿ ಕೋಡಿ ವಿದ್ಯಾಪ್ರಸಾರ ಹಳೇವಿದ್ಯಾರ್ಥಿ ಸಂಘದ ಅಧ್ಯಕ್ಷ ತೇಜಪಾಲ್ ಸುವರ್ಣ ವಹಿಸಿದ್ದರು.

ಹೆಜಮಾಡಿ ಗ್ರಾಪಂ ಮಾಜಿ ಅಧ್ಯಕ್ಷ ವಾಮನ ಕೋಟ್ಯಾನ್ ನಡಿಕುದ್ರು, ಗ್ರಾಪಂ ಪಿಡಿಒ ಮಮತಾ ಶೆಟ್ಟಿ, ಕೋಡಿ ಕ್ರಿಕೆಟರ್ಸ್ ಅಧ್ಯಕ್ಷ ಸೀತಾರಾಮ ಬಂಗೇರ ಮುಖ್ಯ ಅತಿಥಿಗಳಾಗಿದ್ದರು.

ಸುಜಿತ್ ಸುವರ್ಣ ಕಾರ್ಯಕ್ರಮ ನಿರ್ವಹಿಸಿದರು.