10-02-2019 ಭಾನುವಾರ ನಡೆದ ಢಕ್ಕೆಬಲಿ ಸೇವೆಯ ಅಂಗವಾಗಿ ಹೊರೆಕಾಣಿಕೆ ಮೆರವಣಿಗೆ

ಪಡುಬಿದ್ರಿ ಶ್ರೀ ಖಡ್ಗೇಶ್ವರೀ ಬ್ರಹ್ಮಸ್ಥಾನದಲ್ಲಿ ಭಾನುವಾರ ಹಳೆಯಂಗಡಿ ಪಾವಂಜೆಯ ಕೃಷ್ಣ ಭಟ್ ಕುಟುಂಬಿಕರಿಂದ ನಡೆದ ಢಕ್ಕೆಬಲಿ ಸೇವೆಯ ಅಂಗವಾಗಿ ಹೊರೆಕಾಣಿಕೆ ಮೆರವಣಿಗೆ ನಡೆಯಿತು.ಈ ಸಂದರ್ಭ,ಕೃಷ್ಣ ಭಟ್ ಕುಟುಂಬಿಕರು,ಶ್ರೀ ವನದುರ್ಗಾ ಟ್ರಸ್ಟ್ ಅಧ್ಯಕ್ಷ ಒಂದನೇ ಗುರಿಕಾರ ಕೊರ್ನಾಯ ಶ್ರೀಪತಿ ರಾವ್,ಪ್ರಧಾನ ಕಾರ್ಯದರ್ಶಿ ವೈ.ಎನ್.ರಾಮಚಂದ್ರ ರಾವ್ ಮತ್ತಿತರರು ಉಪಸ್ಥಿತರಿದ್ದರು.