17-02-2019 ಭಾನುವಾರ ನಡೆದ ಢಕ್ಕೆಬಲಿ ಸೇವೆಯ ಅಂಗವಾಗಿ ಹೊರೆ ಕಾಣಿಕೆ ಮೆರವಣಿಗೆ

ಪಡುಬಿದ್ರಿ ಶ್ರೀ ಖಡ್ಗೇಶ್ವರೀ ಬ್ರಹ್ಮಸ್ಥಾನದಲ್ಲಿ ಬೆಳ್ಮಣ್ಣು-ಸೂಡ ಸೆನರಬೆನ್ನಿ ದಿನೇಶ್ ಶೆಟ್ಟಿ ಕುಟುಂಬಿಕರ ವತಿಯಿಂದ ಭಾನುವಾರ ನಡೆದ ಢಕ್ಕೆಬಲಿ ಸೇವೆಯ ಅಂಗವಾಗಿ ಹೊರೆ ಕಾಣಿಕೆ ಮೆರವಣಿಗೆಯಲ್ಲಿ ಪಡುಬಿದ್ರಿ ಸಂತೋಷ್ ಶೆಟ್ಟಿ ಪಲ್ಲವಿ,ಸುರೇಶ್ ಶೆಟ್ಟಿ ಅಡ್ವೆ,ಶ್ರೀ ವನದುರ್ಗಾ ಟ್ರಸ್ಟ್ ಅಧ್ಯಕ್ಷ ಕೊರ್ನಾಯ ಶ್ರೀಪತಿ ರಾವ್,ಪ್ರಧಾನ ಕಾರ್ಯದರ್ಶಿ ವೈ.ಎನ್.ರಾಮಚಂದ್ರ ರಾವ್ ಉಪಸ್ಥಿತರಿದ್ದರು.ಈ ಸಂದರ್ಭ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ನಡೆದ ಅನ್ನಸಂತರ್ಪಣೆಯಲ್ಲಿ ಹತ್ತು ಸಾವಿರಕ್ಕೂ ಅಧಿಕ ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು.