ಕೊರೊನಾ ಹೋಗಲಾಡಿಸುವ ಶಕ್ತಿ ಯೋಗಕ್ಕಿದೆ-ಡಾ.ದೇವಿಪ್ರಸಾದ್ ಶೆಟ್ಟಿ

ಪಡುಬಿದ್ರಿ: ವಿಶ್ವವ್ಯಾಪಿಯಾಗಿರುವ ಮಹಾಮಾರಿ ಕೊರೊನಾ ಹಾವಳಿಯಿಂದ ಅಸ್ಥಿರ ಪರಿಸ್ಥಿತಿ ಉಂಟಾಗಿದ್ದು, ಕೊರೊನಾ ಹೋಗಲಾಡಿಸುವ ಶಕ್ತಿ ಯೋಗಕ್ಕಿದೆ ಎಂದು ಪಡುಬಿದ್ರಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿ ಹೇಳಿದರು
.
ಭಾನುವಾರ ಪಡುಬಿದ್ರಿ ಬಂಟರ ಭವನದ ತೆರೆದ ಸಭಾಂಗಣದಲ್ಲಿ ಜೇಸಿಐ ಪಡುಬಿದ್ರಿ ಮತ್ತು ಪಡುಬಿದ್ರಿ ಬಂಟರ ಯಾನೆ ನಾಡವರ ಸಂಘದ ಆಶ್ರಯದಲ್ಲಿ ನಡೆದ ವಿಶ್ವ ಯೋಗ ದಿನಾಚರಣೆ-2020 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜೇಸಿಐ ಪಡುಬಿದ್ರಿಯ ಅಧ್ಯಕ್ಷ ಪ್ರದೀಪ್ ಆಚಾರ್ಯ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಜೇಸಿಐ ವಲಯ 15ರ ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕಿ ಅಶ್ವಿನಿ ಐತಾಳ್, ಜೇಸಿಐ ಬೆಳ್ಮಣ್ಣು ಅಧ್ಯಕ್ಷ ಸತ್ಯನಾರಾಯಣ ಭಟ್, ಹಿರಿಯ ಯೋಗಪಟು ಹಾಗೂ ಜಿಲ್ಲಾ ಆಯುಷ್ ಅಧ್ಯಕ್ಷ ಡಾ.ಎನ್.ಟಿ.ಅಂಚನ್, ಪಡುಬಿದ್ರಿ ಬಂಟರ ಸಂಘದ ಕೋಶಾಧಿಕಾರಿ ರವಿ ಶೆಟ್ಟಿ ಗುಂಡ್ಲಾಡಿ, ಜೇಸಿಐ ಪಡುಬಿದ್ರಿಯ ನಿಕಟಪೂರ್ವಾಧ್ಯಕ್ಷ ಅನಿಲ್ ಶೆಟ್ಟಿ, ಜ್ಯೂನಿಯರ್ ಜೇಸಿ ಅಧ್ಯಕ್ಷ ಆದಿತ್ಯ ಜೆ.ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು.