ಆಳ್ವಾಸ್ ವಿದ್ಯಾರ್ಥಿನಿ ರಾಷ್ಟ್ರ ಮಟ್ಟದ ಕಬಡ್ಡಿ ತಂಡಕ್ಕೆ ಆಯ್ಕೆ

ಪಡುಬಿದ್ರಿ: ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶೀಬಾ ಎನ್.ಕರ್ಕೇರರವರು ಜನವರಿ 3ರಿಂದ ಜನವರಿ 9ರ ವರೆಗೆ ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯದ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಆಳ್ವಾಸ್‍ನಿಂದ ಐವರು,ಉಜಿರೆಯಿಂದ ಒಬ್ಬರು,ಉಡುಪಿಯಿಮದ ಒಬ್ಬರು ಮತ್ತು ಧಾರವಾಡದಿಂದ ಮೂವರು ತಂಡದಲ್ಲಿ ಇದ್ದಾರೆ.

ಇತ್ತೀಚೆಗೆ ತುಮಕೂರಿನಲ್ಲಿ ನಡೆದ ಪಿಯುಸಿ ವಿದ್ಯಾರ್ಥಿಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ದಕ ಜಿಲ್ಲೆಯನ್ನು ಪ್ರತಿನಿಧಿಸಿದ ತಂಡ ಪ್ರಥಮ ಸ್ಥಾನ ಗಳಿಸಿದ್ದು,ಗಮನಾರ್ಹ ಪ್ರದರ್ಶನ ನೀಡಿದ್ದ ಶೀಬಾ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದರು.

ಇವರು ಪಡುಬಿದ್ರಿಯ ಕಾಡಿಪಟ್ನ ನಿವಾಸಿ ಹೀರಾವತಿ-ನಾರಾಯಣ ಕರ್ಕೇರ ದಂಪತಿಗಳ ಪುತ್ರಿಯಾಗಿದ್ದಾರೆ.