ಕನ್ನಡ ಮಾಧ್ಯಮ ಶಾಲೆಗಳಿಂದ ಗುಣಮಟ್ಟದ ಶಿಕ್ಷಣ: ಶಾಸಕ ಲಾಲಾಜಿ ಮೆಂಡನ್

ಪಡುಬಿದ್ರಿ: ಕನ್ನಡ ಮಾಧ್ಯಮ ಶಾಲೆಗಳು ಇಂದಿಗೂ ಗುಣಮಟ್ಟದ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡುತ್ತಿದೆ. ನಮ್ಮ ಹಿರಿಯರು ಕಟ್ಟಿ ಬೆಳೆಸಿದ ಇಂತಹ ಸಂಸ್ಥೆಗಳನ್ನು ಇನ್ನಷ್ಟು ಎತ್ತರಕ್ಕೇರಿಸಬೇಕಾಗಿ ಕಾಪು ಶಾಸಕ ಲಾಲಾಜಿ ಆರ್.ಮೆಂಡನ್ ಹೇಳಿದರು.

ಅವರು ಎರ್ಮಾಳು ತೆಂಕ ಸರಕಾರಿ ಪ್ರೌಢಶಾಲೆ ಇಲ್ಲಿನ ಶಾಲಾ ವಾರ್ಷಿಕೋತ್ಸವದಲ್ಲಿ ಮುಖು ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಸಮಾರಂಭದ ಮುಖ್ಯ ಅತಿಥಿಗಳಾಗಿದ್ದ ಜಿ.ಪಂ. ಸದಸ್ಯ ಶಶಿಕಾಂತ್ ಪಡುಬಿದ್ರಿ ಮಾತನಾಡಿ, ತಾನು ಸರಕಾರಿ ಶಾಲೆಯಲ್ಲಿ ಕಲಿತು ಬಂದವನಾಗಿದ್ದೇನೆ. ನಮ್ಮಂತಹ ಸಹಸ್ರಾರು ವಿದ್ಯಾರ್ಥಿಗಳು ಕನ್ನಡ ಮಾಧ್ಯಮದಲ್ಲೇ ಕಲಿತು ಇಂದೂ ದೇಶ ವಿದೇಶಗಳಲ್ಲಿ ಖ್ಯಾತಿಯನ್ನೂ ಪಡೆದಿದ್ದಾರೆ. ಸರಕಾರವು ನೀಡುವ ಸಕಲ ಸವಲತ್ತುಗಳನ್ನೂ ಬಳಸಿಕೊಂಡು ಉತ್ತಮ ವಿದ್ಯಾಭ್ಯಾಸವನ್ನು ಹೊಂದಿರಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತುಗಳನ್ನಾಡಿದರು.

ತಾ.ಪಂ. ಸದಸ್ಯ ಕೇಶವ ಮೊಯ್ಲಿ, ತೆಂಕ ಗ್ರಾ.ಪಂ. ಅಧ್ಯಕ್ಷೆ ಅರುಣಾ ಕುಮಾರಿ, ವೈ.ಗೋಪಾಲ ಶೆಟ್ಟಿ, ಡಾ.ಸುನಿಲ್ ಕುಮಾರ್, ವಾರ್ಷಿಕೋತ್ಸವ ಸಮಿತಿಯ ಅಧ್ಯಕ್ಷ ಗುಣಕರ ಶೆಟ್ಟಿ, ಪ್ರಾಥಮಿಕ ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಶೇಖರ್, ತೆಂಕ ಮೊಗವೀರ ಸಭಾ ಅಧ್ಯಕ್ಷ ದಾಮೋದರ ಎಸ್.ಸುವರ್ಣ, ಎರ್ಮಾಳು ತೆಂಕ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ಕಿಶೋರ್ ಕುಮಾರ್, ಮಹಿಳಾ ಮಂಡಲದ ಉಪಾಧ್ಯಕ್ಷೆ ಉಮಾವತಿ ಎನ್.ಸುವರ್ಣ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲಲಿತಾ, ಪ್ರೌಢ ಶಾಲಾ ವಿದ್ಯಾರ್ಥಿ ನಾಯಕ ಯಶವಂತ, ಪ್ರಾಥಮಿಕ ಶಾಲಾ ವಿದ್ಯಾರ್ಥಿ ನಾಯಕ ಪ್ರಮೋದ್ ಉಪಸ್ಥಿತರಿದ್ದರು.

ಸನ್ಮಾನ: ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಬಿ.ಪಿ.ನಾಯ್ಕ್, ಗೌರವ ಶಿಕ್ಷಕಿಯರಾದ ಗೀತಾ ಹಾಗೂ ಕಮಲಾಕ್ಷಿ ಅವರನ್ನು ಸಮ್ಮಾನಿಸಲಾಯಿತು.

ಎಸ್‍ಡಿಎಂಸಿ ಅಧ್ಯಕ್ಷ ಸತೀಶ್ ಆರ್. ಸಾಲ್ಯಾನ್