ಜುಲೈ 28: ಪಡುಬಿದ್ರಿ ಬಂಟರ ಭವನದಲ್ಲಿ ಆಟಿದ ಕೂಟ

ಪಡುಬಿದ್ರಿ: ಬಂಟರ ಸಂಘ ಪಡುಬಿದ್ರಿಯ ಮಹಿಳಾ ವಿಭಾಗದ ವತಿಯಿಂದ ಜುಲೈ 28 ಭಾನುವಾರ ಪಡುಬಿದ್ರಿ ಬಂಟರ ಭವನದಲ್ಲಿ ಆಟಿದ ಕೂಟ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 11 ಗಂಟೆಗೆ ಬಂಟರ ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ನೇತ್ರಾವತಿ ಆರ್.ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಂಟರ ಸಂಘದ ಅಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿ ಆಟಿದ ಕೂಟ ಉದ್ಘಾಟಿಸುವರು.
ರಾಷ್ಟ್ರ ಪ್ರಶಸತಿ ವಿಜೇತ ಶಿಕ್ಷಕ ಕುದಿ ವಸಂತ ಶೆಟ್ಟಿ ದಿಕ್ಸೂಚಿ ಭಾಷಣಗೈಯ್ಯಲಿರುವರು. ಉಡುಪಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಬಂಟ್ಸ್ ವೆಲ್‍ಫೇರ್ ಟ್ರಸ್ಟ್ ಅಧ್ಯಕ್ಷ ವೈ.ಶಶಿಧರ್ ಶೆಟ್ಟಿ, ಸಿರಿಮುಡಿ ದತ್ತಿನಿಧಿಯ ಗೌರವಾಧ್ಯಕ್ಷ ಸಾಂತೂರು ಭಾಸ್ಕರ ಶೆಟ್ಟಿ ಮುಖ್ಯ ಅತಿಥಿಗಳಾಗಿರುವರು.