ತೆಂಕ ಎರ್ಮಾಳು ಹಾಲು ಉತ್ಪಾದಕರ ಸಂಘಕ್ಕೆ ಪ್ರಶಸ್ತಿ

ಪಡುಬಿದ್ರಿ : ತೆಂಕ ಎರ್ಮಾಳು ಹಾಲು ಉತ್ಪಾದಕರ ಸಹಕಾರ ಸಂಘವು 2018-19ನೇ ಸಾಲಿನ ಉಡುಪಿ ಜಿಲ್ಲೆಯ ಒಟ್ಟು 336 ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಅತ್ಯುತ್ತಮ ಸಂಘವೆಂದು ದಕ್ಷಿಣ ಕನ್ನಡ ಹಾಲು ಒಕ್ಕೂಟದಿಂದ ಪ್ರಥಮ ಪ್ರಶಸ್ತಿಯನ್ನು ಪಡೆದಿರುತ್ತದೆ.

ಮಂಗಳೂರಿನ ಕುಲಶೇಖರದಲ್ಲಿರುವ ಕೊರ್ಡೆಲ್ ಹಾಲ್‍ನಲ್ಲಿ ಜರಗಿದ ಮಹಾಸಭೆಯಲ್ಲಿ ಒಕ್ಕೂಟದ ಅಧ್ಯಕ್ಷರಾದ ರವಿರಾಜ್ ಹೆಗ್ಡೆ ಅವರು ಸಂಘದ ಅಧ್ಯಕ್ಷರಾದ ಅಶೋಕ ರಾಜ ಎರ್ಮಾಳು ಬೀಡು ಹಾಗೂ ಸಂಘದ ಮುಖ್ಯ ಕಾರ್ಯನಿರ್ವಾಹಕರಾದ ಪ್ರಶಾಂತ್ ದೇವಾಡಿಗ ಅವರಿಗೆ ಪ್ರಶಸ್ತಿಯನ್ನು ಪ್ರದಾನಿಸಿದರು.

ಒಕ್ಕೂಟದ ಉಪಾಧ್ಯಕ್ಷ ಪ್ರಕಾಶ್ ಚಂದ್ರ ಶೆಟ್ಟಿ, ಕಾರ್ಯನಿರ್ದೇಶಕ ಡಾ.ಜಿ.ವಿ. ಹೆಗ್ಡೆ, ನಿರ್ದೇಶಕರುಗಳು, ವ್ಯವಸ್ಥಾಪಕರು, ಉಪ ವ್ಯವಸ್ಥಾಪಕರು, ಅಧಿಕಾರಿ, ಸಿಬ್ಬಂದಿ ವರ್ಗ ಮತ್ತು ಸಹಕಾರ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಉಪಸ್ಥಿತರಿದ್ದರು.