ದಾನಿಗಳ ಸಹಕಾರಗಳಿಂದ ಸರಕಾರಿ ಶಾಲೆಗಳ ಅಭಿವೃದ್ಧಿ-ಲಾಲಾಜಿ ಆರ್.ಮೆಂಡನ್

ಪಡುಬಿದ್ರಿ: ಗ್ರಾಮೀಣ ಭಾಗದಲ್ಲಿದ್ದುಕೊಂಡು ಶೇ 100 ಫಲಿತಾಂಶದೊಂದಿಗೆ ಹಾಗೂ ಸ್ಥಳೀಯ ದಾನಿಗಳ ಸಹಕಾರದೊಂದಿಗೆ ಶೇಕಡಾ 100 ಫಲಿತಾಂಶ ಪಡೆದ ಪಲಿಮಾರು ಶಾಲೆಯು ಖಾಸಗಿ ಶಾಲೆಗಳಿಗೂ ಮಾದರಿಯಾಗಿದೆ ಎಂದು ಕಾಪು ಕ್ಷೇತ್ರದ ಶಾಸಕ ಲಾಲಾಜಿ ಆರ್ ಮೆಂಡನ್ ಹೇಳಿದರು.

ಅವರು ಪಲಿಮಾರು ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗ ಸಂಸ್ಥೆಯ ಪ್ರತಿಭಾ ಪುರಸ್ಕಾರ ಹಾಗೂ ವಾರ್ಷಿಕೋತ್ಸವ ಸಂದರ್ಭ ಮಾತನಾಡಿದರು.

ಇದೇ ಸಂದರ್ಭದಲ್ಲಿ ಮಹಾದಾನಿಗಳಾಗಿ ಸಂಸ್ಥೆಯನ್ನು ಕಟ್ಟಲು ಸಹಕರಿಸಿದ ರಾಮ್‍ದಾಸ್ ಜಿ ಪ್ರಭು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾಗಿ ನಿಸ್ವಾರ್ಥ ಸೇವೆ ನೀಡಿದ ಎಂ.ಪಿ. ಮೊೈದಿನಬ್ಬ ಇವರನ್ನು ಸನ್ಮಾನಿಸಲಾಯಿತು.ಸರಕಾರದಿಂದ ಹೈಸ್ಕೂಲು ವಿದ್ಯಾರ್ಥಿಗಳಿಗೆ ನೀಡಲಾಗುವ ಸೈಕಲುಗಳನ್ನು, ಶಾಸಕರು ವಿತರಿಸಿದರು.
ತಾಪಂ ಸದಸ್ಯ ದಿನೇಶ್ ಕೋಟ್ಯಾನ್, ಗ್ರಾಪಂ ಅಧ್ಯಕ್ಷ ಜಿತೇಂದ್ರ ಫುಟಾರ್ಡೊ, ಉಪಾಧ್ಯಕ್ಷೆ ಸುಮಂಗಲಾ ದೇವಾಡಿಗ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಮಧುಕರ್ ಸುವರ್ಣ, ಬಿಜೆಪಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಸಾದ್ ಪಲಿಮಾರು, ಉದ್ಯಮಿಗಳಾದ ದಿನೇಶ್ ಪ್ರಭು ಹಾಗೂ ರವೀಂದ್ರ ಪ್ರಭು, ವಿಕಾಸ್ ಭಾರತ್ ಟ್ರಸ್ಟ್‍ನ ಸದಸ್ಯ ರಾಯೇಶ್ ಪೈ ಉಪಸ್ಥಿತರಿದ್ದರು.
ಕಾಪು ಬ್ಲಾಕ್ ಕಾಂಗ್ರೆಸ್ (ದಕ್ಷಿಣ) ಇದರ ಅಧ್ಯಕ್ಷ ನವೀನ್ ಚಂದ್ರ ಸುವರ್ಣರು ಧ್ವಜಾರೋಹಣಗೈಯುವ ಮೂಲಕ, ಪ್ರತಿಭಾ ಪುರಸ್ಕಾರ ಹಾಗೂ ವಾರ್ಷಿಕೋತ್ಸವ ಚಟುವಟಿಕೆಗಳಿಗೆ ಚಾಲನೆ ನೀಡಿದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಗಾಯತ್ರಿ ಡಿ. ಪ್ರಭು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಸುರೇಶ್ ಆಚಾರ್ಯ, ವಿದ್ಯಾರ್ಥಿ ನಾಯಕರಾದ ನಿಶಾನ್ ಸಾಲಿಯಾನ್ ಹಾಗೂ ಅಜಿತ್ ಉಪಸ್ಥಿತರಿದ್ದರು.

ಪ್ರಾಂಶುಪಾಲೆ ಗ್ರೆಟ್ಟಾ ಮೊರಾಸ್ ಹಾಗೂ ಹಿರಿಯ ಸಹಶಿಕ್ಷಕಿ ಆಶಾ.ಕೆ ವರದಿ ವಾಚಿಸಿದರು. ಶಿಕ್ಷಕಿ ಜಯಂತಿ ಹಾಗೂ ಕಲ್ಲೇಶ್ ಇವರು ಸನ್ಮಾನ ಪತ್ರಗಳನ್ನು ವಾಚಿಸಿದರು. ಉಪನ್ಯಾಸಕಿ ವಿಜಯಲಕ್ಷ್ಮಿ ಸ್ವಾಗತಿಸಿದರು. ಶಿಕ್ಷಕಿ ಶಾಂತಿಭಟ್ ಧನ್ಯವಾದ ಸಮರ್ಪಿಸಿದರು. ಹಿರಿಯ ಉಪನ್ಯಾಸಕಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು.

ವಾರ್ಷಿಕೋತ್ಸವ ಪ್ರಯುಕ್ತ ದಿನಾಂಕ 07.12.2018 ರಂದು ಶಾಲಾ ಕ್ರೀಡಾಕೂಟವನ್ನು ಏರ್ಪಡಿಸಲಾಗಿದ್ದು, ಜಿಪಂ ಸದಸ್ಯ ಶಶಿಕಾಂತ್ ಪಡುಬಿದ್ರಿ ಪಥ ಸಂಚಲನದ ಗೌರವ ಸ್ವೀಕರಿಸಿದರು. ತಾಪಂ ಸದಸ್ಯ ದಿನೇಶ್ ಕೋಟ್ಯಾನ್ ಧ್ವಜಾರೋಹಣಗೈದರು. ಗ್ರಾಪಂ ಅಧ್ಯಕ್ಷ ಜಿತೇಂದ್ರ ಪುಟಾರ್ಡೊ ಕ್ರೀಡಾ ಜ್ಯೋತಿ ಬೆಳಗಿಸಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಗಾಯತ್ರಿ ಡಿ. ಪ್ರಭು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಸುರೇಶ್ ಆಚಾರ್ಯ, ಬಿಜೆಪಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಸಾದ್ ಪಲಿಮಾರು, ಗ್ರಾಪಂ ಸದಸ್ಯರಾದ ಮಧುಕರ್ ಸುವರ್ಣ, ಸೌಮ್ಯಲತ ಹಾಗೂ ವಿಕಾಸ್ ಭಾರತ್ ಟ್ರಸ್ಟ್‍ನ ಸದಸ್ಯ ರಾಯೇಶ್ ಪೈ ಉಪಸ್ಥಿತರಿದ್ದರು.

ದೈಹಿಕ ಶಿಕ್ಷಣ ಶಿಕ್ಷಕಿ ಜಯಶ್ರೀ ಅತ್ಯುತ್ತಮವಾಗಿ ಮಕ್ಕಳನ್ನು ಕ್ರೀಡೆಗೆ ಸಜ್ಜುಗೊಳಿಸಿದ್ದರು. ಪ್ರಾಂಶುಪಾಲರಾದ ಗ್ರೆಟ್ಟಾ ಮೊರಾಸ್ ಸ್ವಾಗತಿಸಿದರು. ಹಿರಿಯ ಸಹಶಿಕ್ಷಕಿ ಆಶಾ.ಕೆ ಧನ್ಯವಾದ ಸಮರ್ಪಿಸಿದರು. ಶಿಕ್ಷಕ ಮಿಲ್ಟನ್ ಕ್ರಾಸ್ತಾ ಕಾರ್ಯಕ್ರಮ ನಿರೂಪಿಸಿದರು.