ಧರ್ಮ ಮತ್ತು ಸಂಸ್ಕøತಿಯ ರಕ್ಷಣೆಗೆ ಭಜನಾ ಸ್ಪರ್ಧೆ ಅಗತ್ಯ: ಶಶಿಕಾಂತ್ ಪಡುಬಿದ್ರಿ

ಪಡುಬಿದ್ರಿ: ಧರ್ಮ ಜಾಗೃತಿ ಮತ್ತು ಸಂಸ್ಕøತಿಗಳ ರಕ್ಷಣೆಗೆ ಭಜನಾ ಸ್ಪರ್ಧೆಗಳ ಆಯೋಜನೆ, ಭಾಗವಹಿಸುವಿಕೆಗಳು ಅಗತ್ಯವಾಗಿದೆ ಎಂದು ಉಡುಪಿ ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷ ಶಶಿಕಾಂತ್ ಪಡುಬಿದ್ರಿ ಹೇಳಿದರು.

ಅವರು ಭಾನುವಾರ ಪಡುಬಿದ್ರಿ ರೋಟರಿ ಕ್ಲಬ್, ಇನ್ನರ್ ವೀಲ್ ಕ್ಲಬ್‍ಗಳ ಆಶ್ರಯದಲ್ಲಿ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಪ್ರಾಯೋಜಕತ್ವದಲ್ಲಿ ಪಡುಬಿದ್ರಿಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲದ ಪ್ರಾಂಗಣದಲ್ಲಿ ಏರ್ಪಡಿಸಲಾಗಿದ್ದ 5ನೇ ವರ್ಷದ ಅವಿಭಜಿತ ದ.ಕ., ಉಡುಪಿ ಜಿಲ್ಲೆಗಳ ಆಯ್ದ 15 ಭಜನಾ ಮಂಡಳಿಗಳ ಭಜನಾ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.

ಉಡುಪಿ ತಾಲೂಕು ಎಪಿಎಂಸಿ ಸದಸ್ಯ ನವೀನ್‍ಚಂದ್ರ ಸುವರ್ಣ ಅಡ್ವೆ ಮಾತನಾಡಿ ಹಾದಿ ತಪ್ಪುತ್ತಿರುವ ನಮ್ಮ ಸಂಸ್ಕøತಿಯ ಪುನರುತ್ಥಾನವಾಗಬೇಕು. ಈ ನಿಟ್ಟಿನಲ್ಲಿ ಯುವಕರೇ ಹೆಚ್ಚಾಗಿರುವ ಪಡುಬಿದ್ರಿ ರೋಟರಿ ಸಂಸ್ಥೆಯು ಇಂತಹಾ ಸ್ಪರ್ಧೆಯನ್ನು ಏರ್ಪಡಿಸಿರುವುದು ಶ್ಲಾಘನೀಯವೆಂದರು. ಪಡುಬಿದ್ರಿ ಸಹಕಾರಿ ವ್ಯಾವಸಾಯಿಕ ಸೊಸೈಟಿಯ ಅಧ್ಯಕ್ಷ ವೈ. ಸುಧೀರ್ ಕುಮಾರ್ ಸಂದರ್ಭೋಚಿತವಾಗಿ ಮಾತನಾಡಿದರು.

ವೇದಿಕೆಯಲ್ಲಿ ಪಡುಬಿದ್ರಿ ಗ್ರಾ. ಪಂ. ಉಪಾಧ್ಯಕ್ಷ ವೈ. ಸುಕುಮಾರ್, ಸಹಾಯಕ ರಾಜ್ಯಪಾಲ ಗಣೇಶ್ ಆಚಾರ್ಯ ಉಚ್ಚಿಲ, ಪಡುಬಿದ್ರಿ ಸಹಕಾರಿ ವ್ಯಾವಸಾಯಿಕ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿಶ್ಮಿತಾ ಪಿ. ಎಚ್., ವಲಯ ಸೇನಾನಿ ರಮೀಜ್ ಹುಸೈನ್, ಉದ್ಯಮಿ ದಯಾಕರ ಶೆಟ್ಟಿ, ಇನ್ನರ್‍ವೀಲ್ ಕ್ಲಬ್ ಅಧ್ಯಕ್ಷೆ ಸುನಂದಾ ವಿಜಯ್ ಮತ್ತಿತರರು ಉಪಸ್ಥಿತರಿದ್ದರು.

ಪಡುಬಿದ್ರಿ ರೋಟರಿ ಕ್ಲಬ್ ಅಧ್ಯಕ್ಷ ರಿಯಾಜ್ ಮುದರಂಗಡಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಸ್ವಾಗತಿಸಿದರು. ರಾಜೇಶ್ ಶೇರಿಗಾರ್ ಕಾರ್ಯಕ್ರಮ ನಿರ್ವಹಿಸಿದರು. ಇನ್ನರ್ ವೀಲ್‍ಕ್ಲಬ್ ಕಾರ್ಯದರ್ಶಿ ಕಸ್ತೂರಿ ಪ್ರವೀಣ್ ವಂದಿಸಿದರು.