ನಿಧನ:ಶ್ರೀದೇವಿ ಎಸ್. ಬಾಳಿಗ

ಮೂಲ್ಕಿ: ಮೂಲ್ಕಿ ವಿಜಯಾ ಕಾಲೇಜಿನಲ್ಲಿ ದೈಹಿಕ ಶಿಕ್ಷಣದ ನಿರ್ದೇಶಕರಾಗಿದ್ದ ದಿ. ಎನ್.ಎಸ್. ಬಾಳಿಗರವರ ಧರ್ಮಪತ್ನಿ ಮೂಲ್ಕಿ ವೆಂಕಟರಮಣ ದೇವಸ್ಥಾನದ ಬಳಿಯ ನಿವಾಸಿ ಶ್ರೀದೇವಿ ಎಸ್.ಬಾಳಿಗ(78) ಅಲ್ಪ ಕಾಲದ ಅಸೌಖ್ಯದಿಂದ ಸೋಮವಾರ ಮುಂಜಾನೆ ನಿಧನರಾದರು.

ಅವರಿಗೆ ಪುತ್ರಿ, ಇಬ್ಬರು ಪುತ್ರರು ಇದ್ದಾರೆ. ಅವರು ಮೂಲ್ಕಿ ವೆಂಕಟರಮಣ ದೇವಸ್ಥಾನದ ಪರಿಸರದಲ್ಲಿ ಜನಾನುರಾಗಿಯಾಗಿದ್ದರು.