ನಿಧನ: ನಿವೃತ್ತ ಶಿಕ್ಷಕ ವೈ.ವಿ.ಸುಬ್ಬ ರಾವ್

ಪಡುಬಿದ್ರಿ: ಎಲ್ಲೂರಿನ ನಿತ್ಯ ಸಹಾಯ ಮಾತಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುದೀರ್ಘ ಅವಧಿಗೆ ಶಿಕ್ಷಕರಾಗಿ, ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ್ದ ಶಿಕ್ಷಕ ವೈ.ವಿ.ಸುಬ್ಬ ರಾವ್(83) ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ ಎಲ್ಲೂರಿನ ಸ್ವಗೃಹ “ಧವಳ”ದಲ್ಲಿ ನಿಧನರಾದರು.

ಅವರಿಗೆ ಪತ್ನಿ, ಪುತ್ರಿ, 2 ಪುತ್ರ ಇದ್ದಾರೆ.

ಎಲ್ಲೂರು ಯುವಕ ಮಂಡಲದ ಸ್ಥಾಪಕರಲ್ಲಿ ಒಬ್ಬರಾಗಿದ್ದ ಅವರು ಅದರ ಸಹ ಸಂಸ್ಥೆ ಪಂಚಾಕ್ಷರೀ ಯಕ್ಷಗಾನ ಮಂಡಳಿಯ ಕಲ್ಪನೆ ಮತ್ತು ಉಪಕ್ರಮದಲ್ಲಿ ಶ್ರಮಿಸಿದ್ದರು.
ಸ್ಥಳೀಯ ಹವ್ಯಾಸಿ ಕಲಾವಿದರಿಗೆ ಮಾದರಿ ಕಲಾವಿದರಾಗಿದ್ದ ಅವರು, ಎಲ್ಲೂರಿನ ಶ್ರೀ ವಿಶ್ವೇಶ್ವರ ದೇವಳದಲ್ಲಿ ನಡೆಯುತ್ತಿದ್ದ ತಾಳಮದ್ದಳೆಗಳಲ್ಲಿ ಸಾಂಪ್ರದಾಯಿಕ ಶೈಲಿಯ ಅರ್ಥಧಾರಿಯಾಗಿದ್ದರು.ಪಂಚಾಕ್ಷರೀ ಯಕ್ಷಗಾನ ಮಂಡಳಿಯಲ್ಲಿ ವೇಷಧಾರಿಯಾಗಿ ಪರಿಶ್ರಮ ಸಾಧಿಸಿದ್ದ ಅವರು ಪಂಚಾಕ್ಷರೀ ಮಕ್ಕಳ ಮೇಳಕ್ಕೂ ಪ್ರೋತ್ಸಾಹ ನೀಡಿದ್ದರು.