ಪಡುಬಿದ್ರಿಯ ಅಟೋ ರಿಕ್ಷಾ ಯೂನಿಯನ್ ಹಾಗೂ ಪಡುಬಿದ್ರಿ ನಾಗರಿಕರ ವತಿಯಿಂದ ವೀರ ಯೋಧರಿಗೆ ಮೊಂಬತ್ತಿ ಹಿಡಿದು ಶ್ರದ್ಧಾಂಜಲಿ

ಪಡುಬಿದ್ರಿಯ ಅಟೋ ರಿಕ್ಷಾ ಯೂನಿಯನ್ ಹಾಗೂ ಪಡುಬಿದ್ರಿ ನಾಗರಿಕರ ವತಿಯಿಂದ ಪುಲ್ವಾಮಾ ದುರಂತದ ವೀರ ಯೋಧರಿಗೆ ಮೊಂಬತ್ತಿ ಹಿಡಿದು ಶ್ರದ್ಧಾಂಜಲಿ ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಪಂ ಅಧ್ಯಕ್ಷೆ ದಮಯಂತಿ ವಿ.ಅಮೀನ್, ಉಪಾಧ್ಯಕ್ಷ ವೈ. ಸುಕುಮಾರ್, ಪಡುಬಿದ್ರಿ ಠಾಣಾಧಿಕಾರಿ ಸತೀಶ್, ಕಾಪು ಬಿಜೆಪಿ ಕ್ಷೇತ್ರಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪಡುಬಿದ್ರಿ ನಾಗರಿಕ ಸಮಿತಿಯ ಅಧ್ಯಕ್ಷ ನವೀನ್‍ಚಂದ್ರ ಜೆ.ಶೆಟ್ಟಿ, ರಿಕ್ಷಾ ಯೂನಿಯನ್ ಅಧ್ಯಕ್ಷ ಲೋಕೇಶ್ ಕಂಚಿನಡ್ಕ, ರವಿ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.