ಪಡುಬಿದ್ರಿ: ಇಂದು ಬಿಜೆಪಿ ಚುನಾವಣಾ ಪೂರ್ವಭಾವಿ ಸಭೆ

ಪಡುಬಿದ್ರಿ: ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಇಂದು(ಮಾ.1)ಶುಕ್ರವಾರ ಸಂಜೆ 5 ಗಂಟೆಗೆ ಪಡುಬಿದ್ರಿಯ ಶ್ರೀ ಬಾಲಗಣೇಶ(ಉದಯಾದ್ರಿ) ದೇವಳದ ಸಭಾಂಗಣದಲ್ಲಿ ಚುನಾವಣಾ ಪೂರ್ವಭಾವಿ ಸಭೆ ಕರೆಯಲಾಗಿದೆ.
ಈ ಸಭೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ,ಶಾಸಕ ಲಾಲಾಜಿ ಆರ್.ಮೆಂಡನ್,ಕ್ಷೇತ್ರಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು,ಜಿಲ್ಲಾ ನಾಯಕರು ಭಾಗವಹಿಸಲಿದ್ದಾರೆಂದು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಎಲ್ಲದಡಿ ತಿಳಿಸಿದ್ದಾರೆ.