ಪಡುಬಿದ್ರಿ : ಬಂಟ ವಿದ್ಯಾರ್ಥಿಗಳ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಪಡುಬಿದ್ರಿ: ಬಂಟರ ಯಾನೆ ನಾಡವರ ಸಂಘ ಪಡುಬಿದ್ರಿ ಇದರ ವತಿಯಿಂದ ಕೊಡಮಾಡುವ ಸಂಘದ ವ್ಯಾಪ್ತಿಯ ಪಡುಬಿದ್ರಿ, ಹೆಜಮಾಡಿ, ಪಲಿಮಾರು, ಇನ್ನಾ, ನಂದಿಕೂರು, ಅವರಾಲು, ಸಾಂತೂರು, ಎಲ್ಲೂರು, ಪಣಿಯೂರು, ಎರ್ಮಾಳು ತೆಂಕ, ಎರ್ಮಾಳು ಬಡಾ ಮತ್ತು ಅಡ್ವೆಯ ಪರಿಸರದ ಬಂಟ ವಿದ್ಯಾರ್ಥಿಗಳ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.

ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಗುವುದು. ಆರ್ಥಿಕವಾಗಿ ಹಿಂದುಳಿದ ಎಸ್‍ಎಸ್‍ಎಲ್‍ಸಿ ಯಿಂದ ಉನ್ನತ ಶಿಕ್ಷಣದ ವರೆಗಿನ ಸ್ವಜಾತಿಯ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನದ ಅರ್ಜಿಯನ್ನು ಪಡುಬಿದ್ರಿ ಬಂಟರ ಭವನದ ಕಚೇರಿಯಿಂದ ಪಡೆದುಕೊಳ್ಳಬಹುದೆಂದು ತಿಳಿಸಿದ್ದಾರೆ.

ತೀರಾ ಆರ್ಥಿಕವಾಗಿ ಹಿಂದುಳಿದ ಸ್ವಜಾತಿ ವಿಧವೆಯರಿಗೆ ವಿಧವ ವೇತನ, ಅಂಗವಿಕಲ ವೇತನ ಮತ್ತು ಅನಾರೋಗ್ಯ ಪೀಡಿತರಿಗೆ ಸಹಾಯಧನ ನೀಡಲು ಅರ್ಜಿಯನ್ನು ನೀಡಲಾಗುವುದು. ಸ್ವಂತ ಮನೆ ಇಲ್ಲದವರಿಗೂ ಮನೆ ನಿರ್ಮಾಣಕ್ಕೆ ಸಹಕಾರ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಅರ್ಜಿದಾರರು ಸಂಪೂರ್ಣ ಮಾಹಿತಿಗಳೊಂದಿಗೆ ಆಗಸ್ಟ್ 30ರೊಳಗೆ ಅರ್ಜಿಯನ್ನು ಸಂಘದ ಕಚೇರಿಗೆ ಹಿಂದಿರುಗಿಸಬೇಕಾಗಿದ್ದು, ಸೆಪ್ಟಂಬರ್ 29ರಂದು ಪಡುಬಿದ್ರಿ ಬಂಟರ ಭವನದಲ್ಲಿ ವಿದ್ಯಾರ್ಥಿವೇತನ ಸಹಿತ ವಿವಿಧ ಸವಲತ್ತುಗಳ ವಿತರಣಾ ಸಮಾರಂಭ ಜರಗಲಿದೆ.

ಪಡುಬಿದ್ರಿ ಬಂಟರ ಸಂಘ ಮತ್ತು ಸಿರಿಮುಡಿ ದತ್ತಿನಿಧಿ ಸಹಭಾಗಿತ್ವದಲ್ಲಿ ಪಡುಬಿದ್ರಿ ಬಂಟ್ಸ್ ವೆಲ್‍ಫೇರ್ ಟ್ರಸ್ಟ್ ಜಾಗತಿಕ ಬಂಟರ ಸಂಘ ಮತ್ತು ಮಾತೃ ಬಂಟರ ಸಂಘ ಮಂಗಳೂರು ಇವರ ಸಹಕಾರದೊಂದಿಗೆ ಕಾರ್ಯಕ್ರಮ ನಡೆಯಲಿದೆ ಎಂದು ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ, ಸಿರಿಮುಡಿ ದತ್ತಿನಿಧಿಯ ಅಧ್ಯಕ್ಷ ಸಾತೂರು ಭಾಸ್ಕರ ಶೆಟ್ಟಿ, ಬಂಟ್ಸ್ ವೆಲ್‍ಫೇರ್ ಟ್ರಸ್ಟ್ ಅಧ್ಯಕ್ಷ ಶಶಿಧರ್ ಶೆಟ್ಟಿ ಎರ್ಮಾಳ್ ಮತ್ತು ಸಂಘದ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಕೋಶಾಧಿಕಾರಿ ರವಿ ಶೆಟ್ಟಿ ಗುಂಡ್ಲಾಡಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿ