ಪಡುಬಿದ್ರಿ: ಲಾರಿಗೆ ಕಾರು ಢಿಕ್ಕಿ

ಪಡುಬಿದ್ರಿ: ಇಲ್ಲಿನ ರಾ.ಹೆ 66ರ ಹಳೇ ಪೊಲೀಸ್ ಠಾಣಾ ಮುಂಭಾಗದಲ್ಲಿ ಕಾರೊಂದು ಢಿಕ್ಕಿ ಹೊಡೆದಿದ್ದು ಪ್ರಯಾಣಿಕರು ಅದೃಷ್ಟವಶಾತ್ ಪಾರಾದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಚಿತ್ರದುರ್ಗದಿಂದ ಮಂಗಳೂರಿಗೆ ಸಾಗುತ್ತಿದ್ದ ಇಂಡಿಕಾ ಕಾರೊಂದು ಅದೇ ಧಿಕ್ಕಿನಲ್ಲಿ ಸಾಗುತ್ತಿದ್ದ ಲಾರಿಯ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜುಗೊಂಡಿದೆ. ಕಾರು ಚಾಲಕ ಯಾವುದೇ ಅಪಾಯವಿಲ್ಲದ ಪಾರಾಗಿದ್ದು ಕಾರಿನಲ್ಲಿ ಸಂಚರಿಸುತ್ತಿದ್ದ ಅನ್ಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡವರಿಗೆ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಕಾರು ಚಾಲಕನ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಪಡುಬಿದ್ರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.