ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಳದಲ್ಲಿ ನೀರಿನ ಘಟಕ

ಮೂಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಳದಲ್ಲಿ ಭಕ್ತಾದಿಗಳ ಉಪಯೋಗಕ್ಕಾಗಿ ದಾನಿಗಳಾದ ಕಿಲ್ಪಾಡಿ ಬಂಡಸಾಲೆ ಸುಜನಾ ಶೇಖರ ಶೆಟ್ಟಿಯವರು ನಿರ್ಮಿಸಿಕೊಟ್ಟ ನಳ್ಳಿ ನೀರಿನ ಘಟಕವನ್ನು ಭಾನುವಾರ ಉದ್ಘಾಟಿಸಲಾಯಿತು. ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ ಮತ್ತು ಅರ್ಚಕ ವೇದಮೂರ್ತಿ ಶ್ರೀಪತಿ ಉಪಾಧ್ಯಾಯರು ಧಾರ್ಮಿಕ ವಿಧಿಗಳನ್ನು ನೆರವೇರಿಸಿದರು. ಈ ಸಂದರ್ಭ ದೇವಳದ ಆಡಳಿತ ಮೊಕ್ತೇಸರ ಎನ್.ಎಸ್.ಮನೋಹರ ಶೆಟ್ಟಿ, ಬ್ರಹ್ಮಕಲಶೋತ್ಸವ ಮತ್ತು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಕಿಲ್ಪಾಡಿ ಬಂಡಸಾಲೆ ಶೇಖರ ಶೆಟ್ಟಿ, ದಾನಿಗಳಾದ ಸುಜನಾ ಶೇಖರ ಶೆಟ್ಟಿ, ಹರಿಕೃಷ್ಣ ಪುನರೂರು, ಸುನಿಲ್ ಆಳ್ವ, ರವೀಂದ್ರ ಶೆಟ್ಟಿ, ಉದಯ ಶೆಟ್ಟಿ ಆದಿಧನ್, ಶಿವಶಂಕರ್ ವರ್ಮ, ಸಂಜೀವ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.