ಮಂಗಳೂರು ಗೋಲ್ಡ್‍ಪಿಂಚ್ ಸಿಟಿಯಲ್ಲಿ ಶಾಶ್ವತ ಕಂಬಳ ಕರೆ ನಂದಿಕೂರು ಅಡ್ವೆ ಕೋಟಿ ಚೆನ್ನಯ ಕಂಬಳೋತ್ಸವದಲ್ಲಿ ಸನ್ಮಾನ ಸ್ವೀಕರಿಸಿ ಕೆ.ಪ್ರಕಾಶ್ ಶೆಟ್ಟಿ ಘೋಷಣೆ

ಪಡುಬಿದ್ರಿ: ತುಳುನಾಡಿನ ಸಾಂಪ್ರದಾಯಿಕ ಕಂಬಳ ಕ್ರೀಡೆಯನ್ನು ಶಾಶ್ವತವಾಗಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮಂಗಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ಶಾಶ್ವತ ಕಂಬಳ ಕರೆ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಬೆಂಗಳೂರು ಎಂಆರ್‍ಜಿ ಗ್ರೂಫ್ ಚೇರ್‍ಮೆನ್ ಕೆ.ಪ್ರಕಾಶ್ ಶೆಟ್ಟಿ ಘೋಷಿಸಿದರು.
ಅಡ್ವೆ-ನಂದಿಕೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಆಶ್ರಯದಲ್ಲಿ ಅಡ್ವೆ ನಂದಿಕೂರಿನಲ್ಲಿ ನಡೆದ 28ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಕಂಬಳೋತ್ಸವದಲ್ಲಿ ಶನಿವಾರ ರಾತ್ರಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.
ಪರಶುರಾಮ ಸೃಷ್ಟಿಯ ತುಳುನಾಡಿನ ಜಾನಪದ ಕ್ರೀಡೆ ಕಂಬಳಕ್ಕೆ ಅವಘಡ ಬಂದಾಗ ಊರ-ಪರವೂರ ಕಂಬಳಾಭಿಮಾನಿಗಳೆಲ್ಲಾ ಹೋರಾಟದ ಮೂಲಕ ಕಂಬಳ ಉಳಿಸುವ ಕಾರ್ಯ ಮಾಡಿದ್ದರು. ಅದ್ಬುತ ಕ್ರೀಡೆ ಕಂಬಳ ನಿರಂತರ ನಡೆಯಬೇಕೆಂಬುದೇ ಉದ್ದೇಶ ಎಂದು ಅವರು ಹೇಳಿದರು.

ಮುಖ್ಯ ಅತಿಥಿಗಳಾಗಿದ್ದ ಶಾಸಕರಾದ ಲಾಲಾಜಿ ಆರ್.ಮೆಂಡನ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಐಕಳಬಾವ ಡಾ.ದೇವಿಪ್ರಸಾದ್ ಶೆಟ್ಟಿ ಬೆಳಪು, ಪಡುಬಿದ್ರಿ ನಾಗರಿಕ ಸೇವಾ ಸಮಿತಿ ಅಧ್ಯಕ್ಷ ನವೀನಚಂದ್ರ ಜೆ.ಶೆಟ್ಟಿ, ಪಲಿಮಾರು ಗ್ರಾಪಂ ಅಧ್ಯಕ್ಷ ಜಿತೇಂದ್ರ ಫುರ್ಟಾಡೋ ಮಾತನಾಡಿದರು.

ವಿರೋಧ ಪಕ್ಷದ ಮುಖ್ಯ ಸÀಚೇತಕ ವಿ.ಸುನಿಲ್ ಕುಮಾರ್, ಮಾಜಿ ಸಚಿವ ರಮಾನಾಥ ರೈ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರಕುಮಾರ್, ಅದಾನಿ-ಯುಪಿಸಿಎಲ್ ಅಧ್ಯಕ್ಷ ಕಿಶೋರ್ ಆಳ್ವ, ಸಾಯಿರಾಧ ಗ್ರೂಫ್‍ನ ಮನೋಹರ ಶೆಟ್ಟಿ ಕಾಪು, ನಂದಳಿಕೆ ಸುಹಾಸ್ ಹೆಗ್ಡೆ, ತಾಪಂ ಸದಸ್ಯ ದಿನೇಶ್ ಕೋಟ್ಯಾನ್, ಜಿಲ್ಲಾ ಕಂಬಳ ಸಮಿತಿ ಗೌರವಾಧ್ಯಕ್ಷ ಭಾಸ್ಕರ ಸುಬ್ಬಯ್ಯ ಕೋಟ್ಯಾನ್, ಅಧ್ಯಕ್ಷ ಪಿ.ಆರ್. ಶೆಟ್ಟಿ, ಮಾಜಿ ಅಧ್ಯಕ್ಷ ಬಾರಕೂರು ಶಾಂತರಾಮ ಶೆಟ್ಟಿ, ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ವೈ.ಪ್ರಪುಲ್ಲ ಶೆಟ್ಟಿ. ಅಡ್ವೆ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಧ್ಯಕ್ಷ ಸುಂದರ ಯು.ಸುವರ್ಣ, ಪಾದೆಬೆಟ್ಟು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತ ಮೊಕ್ತೇಸರ ಜಿತೇಂದ್ರ ಶೆಟ್ಟಿ ಬರ್ಪಾಣಿ, ಬಿಜೆಪಿ ಕಾಪು ಕ್ಷೇತ್ರ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಉದ್ಯಮಿಗಳಾದ ಎಸ್.ಕೆ.ಸಾಲ್ಯಾನ್, ಹರೀಶ್ ವಾಸು ಶೆಟ್ಟಿ, ಸುರೇಶ್ ಶೆಟ್ಟಿ ಗುರ್ಮೆ, ಸಂತೋಷ್ ಕುಮಾರ್ ಶೆಟ್ಟಿ, ಅಡ್ವೆ-ನಂದಿಕೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಅಡ್ವೆ ಮೂಡ್ರಗುತ್ತು ಚಿತ್ತರಂಜನ್ ಶೆಟ್ಟಿ, ಅಡ್ವೆ ಕಂಕಣಗುತ್ತು ಹರೀಶ್ ಶೆಟ್ಟಿ, ಸುರೇಶ್ ಶೆಟ್ಟಿ ಅಡ್ವೆ ಮೂಡ್ರಗುತ್ತು, ಕಾರ್ಯಾಧ್ಯಕ್ಷ ಕೊಳಚೂರು ಕೊಂಡೆಟ್ಟು ಸುಕುಮಾರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನವೀನಚಂದ್ರ ಸುವರ್ಣ ಅಡ್ವೆ, ಉಪಾಧ್ಯಕ್ಷರಾದ ಸತೀಶ್ ಶೆಟ್ಟಿ ಬೆಜ್ಜಬೆಟ್ಟು, ಶಶಿಕುಮಾರ ಶೆಟ್ಟಿ ಸಾಂತೂರು ಬಾಲ್ಕಟ್ಟ ಮನೆ, ಕಾರ್ಯದರ್ಶಿಗಳಾದ ಶಶಿಧರ ಹೆಗ್ಡೆ ಅಡ್ವೆ, ಉದಯ ರೈ ಅರಂತಡೆ, ಕೃಷ್ಣ ಕುಮಾರ್ ಶೆಟ್ಟಿ ಸನ್ನೋಣಿ, ಕೋಶಾಧಿಕಾರಿಗಳಾದ ಲಕ್ಷ್ಮಣ್ ಶೆಟ್ಟಿವಾಲ್ ಅರಂತಡೆ, ಗಣೇಶ್ ಶೆಟ್ಟಿ ಸಾಂತೂರು, ಅಮರನಾಥ ಶೆಟ್ಟಿ ಅಣ್ಣಾಜಿಗೋಳಿ ಉಪಸ್ಥಿತರಿದ್ದರು.

ಫೋಟೋ: ಅಡ್ವೆ ನಂದಿಕೂರಿನಲ್ಲಿ ನಡೆದ 28 ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಕಂಬಳೋತ್ಸವದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಕೆ.ಪ್ರಕಾಶ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.