ರಾಜ್ಯ ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು ಟಿ ಖಾದರ್ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ

ಮೂಲ್ಕಿ: ರಾಜ್ಯ ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು ಟಿ ಖಾದರ್ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭ ಸಚಿವರನ್ನು ಕ್ಷೇತ್ರದ ಅನುವಂಶಿಕ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ ಮತ್ತು ಮೂಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ಸ್ವಾಗತಿಸಿದರು. ಕ್ಷೇತ್ರದ ಅರ್ಚಕ ಶ್ರೀಪತಿ ಉಪಾದ್ಯಾಯ ರವರು ವಿಶೇಷ ಪೂಜೆ ಸಲ್ಲಿಸಿ ಆಶೀರ್ವಚನ ನೀಡಿದರು. ಬಳಿಕ ಸಚಿವರನ್ನು ಕ್ಷೇತ್ರದ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭ ಕ್ಷೇತ್ರದ ಜೀರ್ಣೋದ್ದಾರ ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷ ಎಂ ನಾರಾಯಣ ಶೆಟ್ಟಿ,ಮಾಜಿ ಸಚಿವ ಅಭಯ ಚಂದ್ರ ಜೈನ್, ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಧನಂಜಯ ಮಟ್ಟು,ಚಂದ್ರಶೇಖರ ನಾನಿಲ್, ಕೃಷ್ಣ ಶೆಟ್ಟಿ, ವಸಂತ ಬೆರ್ನಾಡ್, ಪುತ್ತುಬಾವು, ಕಿಶೋರ್ ಶೆಟ್ಟಿ ದೆಪ್ಪುಣಿ ಗುತ್ತು, ಅಶೋಕ್ ಪೂಜಾರ, ವಿಮಲಾ ಪೂಜಾರಿ ಮತ್ತಿತರರಿದ್ದರು.