ಶ್ರೀ ಕ್ಷೇತ್ರ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಭೇಟಿ

ಮೂಲ್ಕಿಯ ಶ್ರೀ ಕ್ಷೇತ್ರ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭ ದೇವಳದ ಅನುವಂಶಿಕ ಮೊಕ್ತೇಸರರಾದ ದುಗ್ಗಣ್ಣ ಸಾವಂತ ಅರಸರು,ಅನುವಂಶಿಕ ಮತ್ತು ಆಡಳಿತ ಮೊಕ್ತೇಸರ ಎನ್.ಎಸ್.ಮನೋಹರ ಶೆಟ್ಟಿ,ಬಪ್ಪನಾಡು ಬ್ರಹ್ಮಕಲಶೋತ್ಸವ ಮತ್ತು ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಮ್.ನಾರಾಯಣ ಶೆಟ್ಟಿ, ಕಾರ್ಯಾಧ್ಯಕ್ಷ ಶೇಖರ ಶೆಟ್ಟಿ ಕಿಲ್ಪಾಡಿ ಭಂಢಸಾಲೆ, ಖ್ಯಾತ ಜ್ಯೋತಿಷಿ ಉಷಾ ವಿಶ್ವನಾಥ ಭಟ್,ಮೂಲ್ಕಿ ಬ್ಲಾಕ್ ಜೆಡಿಎಸ್ ಅಧ್ಯಕ್ಷ ಜೀವನ್ ಕೆ.ಶೆಟ್ಟಿ,ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಧನಂಜಯ ಮಟ್ಟು,ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ ವಿ.ಅಮೀನ್,ದೀಪಕ್ ಕೊಟ್ಯಾನ್ ಇನ್ನಾ,ಬಪ್ಪನಾಡು ದೇವಳದ ಕಾರ್ಯನಿರ್ವಹಣಾಧಿಕಾರಿ ಜಯಮ್ಮ ಪಿ.,ನಾಗೇಶ್ ಬಪ್ಪನಾಡು,ನವೀನ್ ಪುತ್ರನ್,ಜಯ ಕುಮಾರ್ ಮಟ್ಟು,ದಿನೇಶ್ ಸುವರ್ಣ ಪಡುಪಣಂಬೂರು ಮತ್ತಿತರರು ಉಪಸ್ಥಿತರಿದ್ದರು.