ಶ್ರೀ ಕ್ಷೇತ್ರ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಿಶೇಷ ಬಲಿ ಉತ್ಸವ

ಮೂಲ್ಕಿಯ ಶ್ರೀ ಕ್ಷೇತ್ರ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶನಿವಾರ ಶ್ರೀ ಗಣಪತಿ ಪ್ರತಿಷ್ಟಾಪನೆಯ ಪ್ರಯುಕ್ತ ನಡೆದ ಮೂಡುವಲು ಉತ್ಸವದ ಅಂಗವಾಗಿ ವಿಶೇಷ ಬಲಿ ಉತ್ಸವ ನಡೆಯಿತು.ಮುಂಜಾನೆ ಶ್ರೀಕ್ಷೇತ್ರದ ತಂತ್ರಿವರ್ಯರಾದ ಶಿಬರೂರು ಗೋಪಾಲಕೃಷ್ಣ ತಂತ್ರಿಗಳ ಪ್ರಧಾನ ಪೌರೋಹಿತ್ಯದಲ್ಲಿ ಮೂಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರ ಉಪಸ್ಥಿತಿಯಲ್ಲಿ ಶ್ರೀ ಮಹಾಗಣಪತಿ ದೇವರಿಗೆ ಕಲಶಾಭಿಶೇಕ,ಗಣಪತಿ ಹೋಮ,ಮಹಾಪೂಜೆ,ಬಲಿ ಉತ್ಸವ ಮತ್ತು ಅನ್ನ ಸಂತರ್ಪಣೆ ನಡೆಯಿತು.ಈ ಸಂದರ್ಭ ಕ್ಷೇತ್ರದ ಅರ್ಚಕ ಕೃಷ್ಣದಾಸ ಭಟ್,ನರಸಿಂಹ ಭಟ್,ಅನುವಂಶಿಕ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ,ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಯಮ್ಮ,ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಬಿ.ನಾರಾಯಣ ಶೆಟ್ಟಿ,ಸಮಿತಿ ಸದಸ್ಯರುಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.