ಸ್ವಾಮಿ ವಿವೇಕಾನಂದರ ಆದರ್ಶ ಯುವ ಪೀಳಿಗೆಗೆ ಅನುಕರಣೀಯ

ಪಡುಬಿದ್ರಿ: ಸ್ವಾಮಿ ವಿವೇಕಾನಂದರ ಆದರ್ಶಗಳು ಯುವ ಪೀಳಿಗೆಗೆ ಅನುಕರಣೀಯವಾಗಿದೆ. ವಿದ್ಯಾರ್ಥಿಗಳು ಅವರ ಆದರ್ಶಗಳನ್ನು ಅಗತ್ಯವಾಗಿ ತಿಳಿದುಕೊಳ್ಳಬೇಕು ಎಂದು ಪಡುಬಿದ್ರಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಧ್ಯಾಪಕ ನವನೀತ ಅರಸ್ ಹೇಳಿದರು.

ಪಡುಬಿದ್ರಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಜೇಸಿಐ ಪಡುಬಿದ್ರಿ ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮ ದಿನದ ಅಂಗವಾಗಿ ನಡೆದ ರಾಷ್ಟ್ರೀಯ ಯುವ ದಿನಾಚರಣೆ-ಚೈತನ್ಯ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಮಾರಂಭದ ಮುಖ್ಯ ಅತಿಥಿ ಜೇಸಿಐ ಪಡುಬಿದ್ರಿಯ ಪೂರ್ವಾದ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಸಮಾಜದಲ್ಲಿ ಉನ್ನತರಾಗಲು ವಿವೇಕಾನಂದರ ಆದರ್ಶಗಳು ಯುವ ಸಮಾಜಕ್ಕೆ ಅಗತ್ಯವಾಗಿದೆ. ವಿದ್ಯಾರ್ಜನೆ ಹಂತದಲ್ಲೇ ಸಕಾರಾತ್ಮಕ ಗುರಿ ನಿರ್ಧರಿಸಿಲು ಯುವ ಸಮಾಜ ಪ್ರಯತ್ನಿಸಬೇಕು ಎಂದರು.

ಜೇಸಿಐ ಇಂಡಿಯಾದ ರಾಷ್ಟ್ರೀಯ ತರಬೇತುದಾರ ಸುಧಾಕರ ಕಾರ್ಕಳ ವಿದ್ಯಾರ್ಥಿಗಳಿಗೆ ತರಬೇತಿ ನಡೆಸಿಕೊಟ್ಟರು.
ಜೇಸಿಐ ಪಡುಬಿದ್ರಿಯ ಅಧ್ಯಕ್ಷ ಪ್ರದೀಪ್ ಎಸ್.ಆಚಾರ್ಯ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ನಿಕಟ ಪೂರ್ವಾಧ್ಯಕ್ಷ ಹಾಗೂ ವಲಯಾಧಿಕಾರಿ ಅನಿಲ್ ಶೆಟ್ಟಿ, ಪೂರ್ವಾಧ್ಯಕ್ಷ ಡಾ.ಮನೋಜ್ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಶಿವರಾಜ್ ಮೊಯ್ಲಿ ಉಪಸ್ಥಿತರಿದ್ದರು.

ಪೂರ್ವಾದ್ಯಕ್ಷ ಜಯ ಎಸ್.ಶೆಟ್ಟಿ ಪದ್ರ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಮನೋಜ್ ಕುಮಾರ್ ವಂದಿಸಿದರು.