ಹೆಜಮಾಡಿ ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಾಲೆಯ ಮುಖ್ಯ ದ್ವಾರ ನಿರ್ಮಾಣ ಕಾಮಗಾರಿ

ಪಡುಬಿದ್ರಿ ಸಮೀಪದ ಹೆಜಮಾಡಿ ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಾಲೆಯ ಮುಖ್ಯ ದ್ವಾರ ನಿರ್ಮಾಣ ಕಾಮಗಾರಿಗೆ ಶನಿವಾರ ಶಾಲಾ ಹಳೇ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಹಾಗೂ ಜಿಲ್ಲಾ ಪರಿಷತ್ ಮಾಜಿ ಸದಸ್ಯ ಪಿ.ರವೀಂದ್ರನಾಥ ಜಿ.ಹೆಗ್ಡೆ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭ ಸಂಘದ ಕಾರ್ಯದರ್ಶಿ ಕೇಶವ ಸಾಲ್ಯಾನ್, ಶೈಕ್ಷಣಿಕ ಚಿಂತಕ ಶೇಖರ್ ಹೆಜ್ಮಾಡಿ, ಮಾಧವ ಸನಿಲ್, ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಸವಿತಾ ನಾಯಕ್, ದೈಹಿಕ ಶಿಕ್ಷಣ ಶಿಕ್ಷಕ ಆಲ್ವಿನ್ ಅಂದ್ರಾದೆ, ಗುತ್ತಿಗೆದಾರ ಶರತ್ ಕುಮಾರ್ ಉಪಸ್ಥಿತರಿದ್ದರು. ಹೆಜಮಾಡಿ ದೇವಳದ ಅರ್ಚಕ ಶ್ರೀನಿವಾಸ ಆಚಾರ್ಯ ಧಾರ್ಮಿಕ ಪ್ರಕ್ರಿಯೆ ನೆರವೇರಿಸಿದರು.