08-02-2019 ಶುಕ್ರವಾರ – ಢಕ್ಕೆಬಲಿ ಸೇವೆಯ ಅಂಗವಾಗಿ ಸಂಜೆ ನಡೆದ ಹೊರೆ ಕಾಣಿಕೆ ಮೆರವಣಿಗೆ

ಪಡುಬಿದ್ರಿ ಶ್ರೀ ಖಡ್ಗೇಶ್ವರೀ ಬ್ರಹ್ಮಸ್ಥಾನದಲ್ಲಿ ಶುಕ್ರವಾರ ಮಂಗಳೂರು ನೀರುಡೆ ನೆಲ್ಲಿತೀರ್ಥ ಹೌಸ್‍ನ ಎನ್.ವೆಂಕಟರಾಜ ಭಟ್ ಕುಟುಂಬಿಕರ ವತಿಯಿಂದ ನಡೆದ ಢಕ್ಕೆಬಲಿ ಸೇವೆಯ ಅಂಗವಾಗಿ ಸಂಜೆ ಹೊರೆ ಕಾಣಿಕೆ ಮೆರವಣಿಗೆಯಲ್ಲಿ ಸುಬ್ರಹ್ಮಣ್ಯ ಮಠಾಧೀಶ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಭಾಗವಹಿಸಿದರು.ಶ್ರೀ ವನದುರ್ಗಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ವೈ.ಎನ್.ರಾಮಚಂದ್ರ ರಾವ್ ಸಹಿತ ಹಲವರು ಉಪಸ್ಥಿತರಿದ್ದರು.