ಅದಾನಿ ಫೌಂಡೇಷನ್‍ನಿಂದ ಯುಪಿಸಿಎಲ್ ಸ್ಥಾವರ ಪರಿಸರದ 1532 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಒಟ್ಟು ರೂ.40 ಲಕ್ಷ ವಿದ್ಯಾರ್ಥಿ ವೇತನ ವಿತರಣೆ.

ಪಡುಬಿದ್ರಿ: ಅದಾನಿ ಒಡೆತನದ ಯುಪಿಸಿಎಲ್ ಸಂಸ್ಥೆಯು ತನ್ನ ಸಿಎಸ್‍ಆರ್ ಯೋಜನೆಯನ್ನು ನಿರ್ವಹಿಸುವ ಅಂಗ ಸಂಸ್ಥೆಯಾದ ಅದಾನಿ ಪ್ರತಿಷ್ಠಾನದ ವತಿಯಿಂದ ಸ್ಥಾವರದ ಸುತ್ತಮುತ್ತಲಿನ 1532 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು ರೂ.40 ಲಕ್ಷ ವಿದ್ಯಾರ್ಥಿ ವೇತನವನ್ನು ವಿತರಿಸಿತು.

ಮುದರಂಗಡಿ ಗ್ರಾಮದ ಸಂತ ಫ್ರಾನ್ಸಿಸ್ ಕ್ಸೇವಿಯರ್ ಚರ್ಚ್ ವಠಾರದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ವಿದ್ಯರ್ಥಿ ವೇತನ ವಿತರಿಸಲಾಯಿತು.

ಸಂತ ಫ್ರಾನ್ಸೀಸ್ ಕ್ಸೇವಿಯರ್ ಚರ್ಚ್ ಧರ್ಮಗುರು ಫ್ರಾನ್ಸಿಸ್ ಕ್ಸೇವಿಯರ್ ಲೇವಿಸ್, ಯುಪಿಸಿಎಲ್ ಸಂಸ್ಥೆಯ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ ಹಾಗೂ ಚರ್ಚ್ ಕಿರಿಯ ಧರ್ಮಗುರು ಡಾನ್ ಪ್ರೀಮ್ ಲೋಬೋ ಅವರು ದೀಪ ಬೆಳಗಿಸುವುದರ ಮೂಲಕ ಕರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಚರ್ಚ್ ಧರ್ಮಗುರು ಫಾದರ್ ಕ್ಸೇವಿಯರ್ ಲೇವಿಸ್‍ರವರು ಮಾತನಾಡಿ,ಅದಾನಿ ಯುಪಿಸಿಎಲ್ ಸಿಎಸ್‍ಆರ್ ಯೋಜನೆಯಡಿಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡುತ್ತಿದೆ ಎಂದರು.

ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ವಿದ್ಯಾರ್ಥಿವೇತನ ನೀಡುವುದರಿಂದ ವಿದ್ಯಾರ್ಥಿಗಳು ಅನೇಕ ಕ್ಷೇತ್ರಗಳಲ್ಲಿ ಉನ್ನತ ವ್ಯಾಸಂಗ ಮಾಡಲು ಅನುವು ಮಾಡಿಕೊಡುತ್ತಿದೆ.ವಿದ್ಯಾರ್ಥಿವೇತನ ಪಡೆದ ವಿದ್ಯಾರ್ಥಿಗಳು ಅದನ್ನು ಸದುಪಯೋಗಿಸಿಕೊಂಡು ಹೆಚ್ಚಿನ ವಿದ್ಯಾಭ್ಯಾಸ ಪಡೆದು ಜೀವನದಲ್ಲಿ ಉನ್ನತ ಮಟ್ಟಕ್ಕೆ ಬೆಳೆದು, ಸಮಾಜದ ಬೆಳವಣಿಗೆಗೆ ತಾವೂ ಸಹ ಕೊಡುಗೆಯನ್ನು ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಹಿತವಚನವನ್ನು ನುಡಿದರು.ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬದ ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸವನ್ನು ಕೈಗೆತ್ತಿಕೊಳ್ಳಲೂ ಸಹ ಅದಾನಿ ಸಮೂಹವು ಶಿಕ್ಷಣ ಅನುದಾನವನ್ನು ನೀಡುತ್ತಿರುವುದು ಶ್ಲಾಘನೀಯ ಎಂದು ಅವರು ತಿಳಿಸಿದರು.ಸಂಸ್ಥೆಯ ಸಿಎಸ್‍ಆರ್ ಚಟುವಟಿಕೆಗಳನ್ನು ಸಮರ್ಪಕವಾಗಿ ನಿಭಾಯಿಸಿಕೊಂಡು ಯೋಜನೆಯ ಪ್ರಯೋಜನೆಗಳನ್ನು ಗ್ರಾಮೀಣ ಜನರಿಗೆ ತಲುಪಿಸುತ್ತಿರುವ ಕಿಶೋರ್ ಆಳ್ವ ಅವರ ಶ್ರಮಕ್ಕೆ ಅಭಿನಂದನೆ ಸಲ್ಲಿಸಿದರು.

ಕಿಶೋರ್ ಆಳ್ವ ಮಾತನಾಡಿ, ಯುಪಿಸಿಎಲ್ ಅದಾನಿ ಫೌಂಡೇಷನ್‍ನ ಸಹಯೋಗದೊಂದಿಗೆ ಸಿಎಸ್‍ಅರ್ ಯೋಜನೆಯಡಿಯಲ್ಲಿ ಶಿಕ್ಷಣ, ಆರೋಗ್ಯ, ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ಮತ್ತು ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಕ್ಷೇತ್ರದಲ್ಲಿ ಸಮಾಜಮುಖಿ ಕೆಲಸಗಳನ್ನು ಪ್ರತಿ ವರ್ಷವೂ ನಿರ್ವಹಿಸಿಕೊಂಡು ಬರುತ್ತಿದ್ದು, ಇಂದು ಶಿಕ್ಷಣ ಕ್ಷೇತ್ರದಲ್ಲಿ ಸ್ಥಾವರದ ಸುತ್ತಮುತ್ತಲಿನ 1,532 ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಒಟ್ಟು ರೂ. 40 ಲಕ್ಷ ಮೌಲ್ಯದ ವಿದ್ಯಾರ್ಥಿವೇತನವನ್ನು ನೀಡುತ್ತಿದೆಎಂದು ಹೇಳಿದರು.
2017-18ನೇ ಶೈಕ್ಷಣಿಕ ಸಾಲಿನಲ್ಲಿಎಸ್.ಎಸ್.ಎಲ್.ಸಿ, ಪಿ.ಯು.ಸಿ, ಡಿಪೆÇ್ಲಮಾ, ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಶೇ.80% ಮತ್ತು ಅಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸ್ಥಾವರದ ಆಸುಪಾಸಿನ ಗ್ರಾಪಂಗಳ ಮುಖೇನ ಗುರುತಿಸಿ ಅವರಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ ಎಂದು ಆಳ್ವ ತಿಳಿಸಿದರು.

ವಿದ್ಯಾರ್ಥಿವೇತನದಿಂದ ಓದುವ ಮಕ್ಕಳಿಗೆ ಹೆಚ್ಚಿನ ವಿದ್ಯಾಭ್ಯಾಸ ಮಾಡಲು ಪೆÇ್ರೀತ್ಸಾಹಿಸುವುದರ ಜೊತೆಗೆ ಇತರ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಪ್ರಕ್ರಿಯೆಯ ಚಿಂತನೆ ಮಾಡಲು ಅನುವು ಮಾಡಿಕೊಡುತ್ತದೆ ಎಂದು ಕಿಶೋರ್ ಆಳ್ವ ಹೇಳಿದರು. ಶಿಕ್ಷಣ ಒಂದು ಆಯುಧವಿದ್ದಂತೆ, ಶಿಕ್ಷಣದಿಂದ ದೇಶ ಅಭಿವೃದ್ಧಿಗೊಳ್ಳುವುದು ಮತ್ತು ಅನೇಕ ಬದಲಾವu Éಕಾಣಬಹುದಾಗಿದೆ ಎಂದು ಆಳ್ವ ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಚರ್ಚ್ ಕಿರಿಯ ಧರ್ಮಗುರು ಡಾನ್ ಪ್ರೀಮ್ ಲೋಬೋ, ಯಾರಾದರೂ ಒಂದು ವರ್ಷಕ್ಕೆ ಏನಾದರೂ ಮಾಡುವುದಾದರೆ ಬತ್ತವನ್ನು ಬೆಳಸಬೇಕು, ಹತ್ತು ವರ್ಷಕ್ಕೆ ಮಾಡುವುದಾದರೆ ಗಿಡವನ್ನು ಬೆಳೆಸಬೇಕು, ಜೀವನ ಪರ್ಯಂತ ಏನಾದರೂ ಮಾಡುವುದಾದರೆ ವಿದಾಭ್ಯಾಸ ಕೊಡಿಸಬೇಕು. ಅದೇ ರೀತಿಯಲ್ಲಿಅದಾನಿ ಸಂಸ್ಥೆಯು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡುವುದರ ಮೂಲಕ ಮಕ್ಕಳಿಗೆ ವಿದ್ಯಾಭ್ಯಾಸ ನೀಡಲು ನೆರವು ಮಾಡಿಕೊಡುತ್ತಿದೆ”ಎಂದರು.

ಯುಪಿಸಿಎಲ್ ಕಂಪನಿಯ ಹಿರಿಯ ವ್ಯವಸ್ಥಾಪಕ ರವಿ ಆರ್.ಜೇರೆ ಸ್ವಾಗತಿಸಿದರು. ಎ.ಜಿ.ಎಮ್.ಗಿರೀಶ್ ನಾವಡ ವಂದಿಸಿದರು. ಸಂತ ಫ್ರಾನ್ಸಿಸ್ ಕ್ಸೇವಿಯರ್ ಶಾಲೆಯ ಶಿಕ್ಷಕ ಚಂದ್ರಹಾಸ ಪ್ರಭು ಕಾರ್ಯಕ್ರಮ ನಿರೂಪಿಸಿದರು.