Dakke Bali Seve of 5th February 2019

ಪಡುಬಿದ್ರಿ ಶ್ರೀ ಖಡ್ಗೇಶ್ವರೀ ಬ್ರಹ್ಮಸ್ಥಾನದಲ್ಲಿ ಮಂಗಳವಾರ ಹೆಜಮಾಡಿ ಕನ್ನಂಗಾರ್ ಬೇಬಿ ಎಲ್.ಸಾಲ್ಯಾನ್,ಭವ್ಯಾ ಮಹೇಶ್ ಸಾಲ್ಯಾನ್ ಕುಟುಂಬಿಕರ ವತಿಯಿಂದ ನಡೆದ ಹರಕೆಯ ಢಕ್ಕೆಬಲಿ ಸೇವೆಯ ಅಂಗವಾಗಿ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ಮಧ್ಯಾಹ್ನ ನಡೆದ ಅನ್ನಸಂತರ್ಪಣೆಯಲ್ಲಿ 11 ಸಾವಿರಕ್ಕೂ ಅಧಿಕ ಭಕ್ತಾದಿಗಳು ಅನ್ನ ಪ್ರಸಾದ ಸ್ವೀಕರಿಸಿದರು.ಸಂಜೆ ನಡೆದ ಹೊರೆ ಕಾಣಿಕೆ ಮೆರವಣಿಕೆಯ ಸಂದರ್ಭ ಸಹಸ್ರಾರು ಭಕ್ತರು ಭಾಗವಹಿಸಿದ್ದರು.ಈ ಸಂದರ್ಭ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದ ಅನುವಂಶಿಕ ಮತ್ತು ಆಡಳಿತ ಮೊಕ್ತೇಸರ ಹಾಗೂ ಪಡುಬಿದ್ರಿ ಬೀಡು ಅರಸರಾದ ರತ್ನಾಕರರಾಜ್ ಅರಸು ಕಿನ್ಯಕ್ಕ ಬಲ್ಲಾಳರು,ಶ್ರೀ ವನದುರ್ಗಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ವೈ.ಎನ್.ರಾಮಚಂದ್ರ ರಾವ್,ಮೀನಾ ಜೆ.ಬಂಗೇರ,ಮಹೇಶ್ ಸಾಲ್ಯಾನ್,ಗಣಪತಿ ಕಾಮತ್ ಮತ್ತಿತರರು ಉಪಸ್ಥಿತರಿದ್ದರು.