ಪಡುಬಿದ್ರಿ: ಯೋಗ ದಿನಾಚರಣೆ ಮಹತ್ವ ಕಾರ್ಯಕ್ರಮ

ಪಡುಬಿದ್ರಿ: ಮಂಗಳೂರು ಜನಸಂಪರ್ಕ ಕಾರ್ಯಾಲಯ, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಪಡುಬಿದ್ರಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಮತ್ತು ಪಡುಬಿದ್ರಿ ಗ್ರಾಮ ಪಂಚಾಯಿತಿಯ ಸಂಯುಕ್ತ ಆಶ್ರಯದಲ್ಲಿ ಪಡುಬಿದ್ರಿ ಕರ್ನಾಟಕ ಪಬ್ಲಿಕ್ ಸ್ಕೂಲ್‍ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಮಹತ್ವದ ಕಾರ್ಯಕ್ರಮ ನಡೆಯಿತು.

ಉಡುಪಿ ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯೀ ಸಮಿತಿಯ ಅಧ್ಯಕ್ಷ ಶಶಿಕಾಂತ್ ಪಡುಬಿದ್ರಿ ಕಾರ್ಯಕ್ರಮ ಉದ್ಘಾಟಿಸಿ ಯೋಗಾಭ್ಯಾಸದ ಮಹತ್ವದ ಬಗ್ಗೆ ತಿಳಿ ಹೇಳಿದರು.

ಪಡುಬಿದ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ದಮಯಂತಿ ವಿ.ಅಮೀನ್ ಸಮಾರಂಭದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.

ಕಾಪು ಬಿಜೆಪಿ ಕ್ಷೇತ್ರಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ತಾಲೂಕು ಪಂಚಾಯಿತಿ ಸದಸ್ಯೆ ನೀತಾ ಗುರುರಾಜ್, ನವೀನ್, ಸರಿಟಾ ಮುಖ್ಯ ಅತಿಥಿಗಳಾಗಿದ್ದರು.

ಪಡುಬಿದ್ರಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಯಶೋದಾ ಕೆ.ಸ್ವಾಗತಿಸಿದರು. ಶಿಕ್ಷಕಿ ಆಶಾ ಎಮ್.ಕೋಟ್ಯಾನ್ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕ ರಮೇಶ್ ದೇವಾಡಿಗ ವಂದಿಸಿದರು.