ಸ್ಪರ್ಧೆಗಳಲ್ಲಿ ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು-ಡಾ.ದೇವಿಪ್ರಸಾದ್ ಶೆಟ್ಟಿ

ಪಡುಬಿದ್ರಿ: ಗ್ರಾಮೀಣ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ಅವರಲ್ಲಿ ಸ್ಪರ್ಧಾಮನೋಭಾವವನ್ನು ಬೆಳೆಸುವುದು ಸ್ತುತ್ಯಾರ್ಹವಾದುದು. ವಿದ್ಯಾರ್ಥಿಗಳು ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು. ಇದರಿಂದ ಆದರ್ಶ ಜೀವನ ಸಾಗಿಸಲು ಸಹಕಾರಿಯಾಗುತ್ತದೆ ಎಂದು ಉಡುಪಿ ಗ್ರಾಪಂ ಅಧ್ಯಕ್ಷರುಗಳ ಒಕ್ಕೂಟದ ಅಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿ ಬೆಳಪು ಹೇಳಿದರು.

ಪಡುಬಿದ್ರಿ ಜೇಸಿಐ ವತಿಯಿಂದ ಪಡುಬಿದ್ರಿಯ ಅಮರ್ ಕಂಫಟ್ರ್ಸ್‍ನ ಸಿರಿ ಗಾರ್ಡನ್‍ನಲ್ಲಿ ನಡೆದ ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಬಹುಮಾನ ವಿತರಿಸಿದ ಜಿಲ್ಲಾ ಪರಿಷತ್ ಮಾಜಿ ಸದಸ್ಯ ಪಿ.ರವೀಂದ್ರನಾಥ ಜಿ.ಹೆಗ್ಡೆ ಮಾತನಾಡಿ, ವ್ಯಕ್ತಿತ್ವ ವಿಕಸನ ಸಂಸ್ಥೆ ಜೇಸಿಯಿಂದ ಯುವ ಜನರಿಗೆ ಅತ್ಯುತ್ತಮ ಕಾರ್ಯ ನಡೆಯುತ್ತಿರುವುದು ಶ್ಲಾಘನೀಯ ಎಂದರು.

ಸನ್ಮಾನ: “ಸೆಲ್ಯೂಟ್ ದ ಸೈಲೆಂಟ್ ವರ್ಕರ್” ಘೋಷಣೆಯಡಿ ನಡೆದ ಕಾರ್ಯಕ್ರಮದಲ್ಲಿ ಪಲಿಮಾರು ಗ್ರಾಪಂನ ಪೌರ ಕಾರ್ಮಿಕರಾದ ರಂಗ, ಸಂಜೀವ, ರಮೇಶ್ ಮತ್ತು ವಿನೋದ್‍ರವರನ್ನು ಜೇಸಿಐ ಪಡುಬಿದ್ರಿ ವತಿಯಿಂದ ಸನ್ಮಾನಿಸಲಾಯಿತು.

ಪ್ರತಿಭಾ ಪುರಸ್ಕಾರ: ದಿ.ವೈ.ಹಿರಿಯಣ್ಣ- ಮೀರಾಬಾಯಿ ದಂಪತಿಯ ಸ್ಮರಣಾರ್ಥ ಪರಿಸರದ 10ನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಜೇಸಿಐ ಇಂಡಿಯಾ ಫೌಂಡೇಶನ್ ನಿರ್ದೇಶಕ ವೈ.ಸುಕುಮಾರ್ ಪ್ರತಿಭಾ ಪುರಸ್ಕಾರ ನಡೆಸಿದರು.

ಪರ್ಯಾಯ ಫಲಕ ವಿತರಣೆ: ಜೇಸಿಐ ಪಡುಬಿದ್ರಿಯ ಸಂಸ್ಥಾಪಕ ವಿಜಯಕುಮಾರ್ ಶೆಟ್ಟಿ ಸ್ಮರಣಾರ್ಥ 10 ನೇ ತರಗತಿಯಲ್ಲಿ ಅತ್ಯುತ್ತಮ ಪಲಿತಾಂಶ ಪಡೆದ ಶಾಲೆಗಳಿಗೆ ನೀಡುವ ಪರ್ಯಾಯ ಪಾರಿತೋಷಕವನ್ನು ಉಚ್ಚಿಲ ಮಹಾಲಕ್ಷ್ಮಿ ಆಂಗ್ಲ ಮಾಧ್ಯಮ ಶಾಲೆ ಪಡೆಯಿತು. ಪಡುಬಿದ್ರಿ ಹೋಟೆಲ್ ಪಲ್ಲವಿಯ ಸಂತೋಷ್ ಕುಮಾರ್ ಶೆಟ್ಟಿ ಪ್ರಶಸ್ತಿ ವಿತರಿಸಿದರು.

ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಸಾಂಸ್ಕøತಿಕ ಸ್ಪರ್ಧೆಯಲ್ಲಿ ಉಚ್ಚಿಲ ಮಹಾಲಕ್ಷ್ಮಿ ಆಂಗ್ಲ ಮಾಧ್ಯಮ ಶಾಲೆ ಸತತ 10 ನೇ ಬಾರಿಗೆ ನಗದು ಸಹಿತ ಪ್ರಶಸ್ತಿ ಪಡೆಯಿತು. ಪಡುಬಿದ್ರಿ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆ ದ್ವಿತೀಯ ಪ್ರಶಸ್ತಿ ಪಡೆಯಿತು.

ಇದೇ ಸಂದರ್ಭ ಆಸುಪಾಸಿನ ಶಾಲಾ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ, ಸಂಗೀತ ಸ್ಪರ್ಧೆ, ಆಶುಭಾಷಣ ಸ್ಪರ್ಧೆ ಮತ್ತು ಸಾಂಸ್ಕøತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಜೇಸಿಐ ಇಂಡಿಯಾದ ಕಾರ್ಯಕ್ರಮ ವಿಭಾಗದ ರಾಷ್ಟ್ರೀಯ ನಿರ್ದೇಶಕ ಸಂದೀಪ್‍ಕುಮಾರ್, ವಲಯ ಉಪಾಧ್ಯಕ್ಷ ಮಕರಂದ್ ಸಾಲ್ಯಾನ್, ಜೇಸಿಐ ಅಧ್ಯಕ್ಷೆ ಸುಪ್ರಿಯಾ ಅನಿಲ್ ಶೆಟ್ಟಿ, ಜ್ಯೂನಿಯರ್ ಜೇಸೀ ಅಧ್ಯಕ್ಷೆ ಬ್ರಾಹ್ಮೀ ಹರೀಶ್, ಕೋಶಾಧಿಕಾರಿ ಪ್ರೀತಿ ಸುವರ್ಣ, ಕಾರ್ಯಕ್ರಮ ನಿರ್ದೇಶಕರುಗಳಾದ ಗಣೇಶ್ ಆಚಾರ್ಯ, ಮನೋಜ್, ಸುರೇಶ್ ಉಪಸ್ಥಿತರಿದ್ದರು.

ಜೇಸಿಐ ಪಡುಬಿದ್ರಿಯ ಅಧ್ಯಕ್ಷ ಅನಿಲ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಜಯ ಎಸ್.ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಪ್ರದೀಪ್ ಆಚಾರ್ಯ ವಂದಿಸಿದರು.

ಫೋಟೋ: ಕ್ಯಾ: ಸಾಂಸ್ಕøತಿಕ ಸ್ಪರ್ಧೆಯಲ್ಲಿ ಉಚ್ಚಿಲ ಮಹಾಲಕ್ಷ್ಮೀ ಆಂಗ್ಲ ಮಾಧ್ಯಮ ಶಾಲೆ ಸತತ 10ನೇ ಬಾರಿ ಪ್ರಶಸ್ತಿ ಪಡೆಯಿತು