ರಾಜ್ಯಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಪಡುಬಿದ್ರಿ ಲಯನ್ಸ್ ಆಂಗ್ಲಮಾಧ್ಯಮ ಶಾಲೆ ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆ

ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಮಂಡ್ಯದ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‍ನಲ್ಲಿ 18-10-2019 ರಂದು ನಡೆದ ರಾಜ್ಯಮಟ್ಟದ, ಪ್ರಾಥಮಿಕ ವಿಭಾಗದ 14ರ ಕೆಳಗಿನ ವಯೋಮಿತಿಯ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಪಡುಬಿದ್ರಿ ಲಯನ್ಸ್ ಆಂಗ್ಲಮಾಧ್ಯಮ ಶಾಲೆಯ ಬಾಲಕಿಯರು, ಬೆಂಗಳೂರು ವಿಭಾಗದ ಬಾಲಕಿಯರ ಜೊತೆ ಸೆಣಸಾಡಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿದ್ದಾರೆ. ಹಾಗು ನವೆಂಬರ್ 8 ರಂದು ಛತ್ತಿಸ್‍ಘಡದಲ್ಲಿ ನಡೆಯುವ ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆ ಆಗಿದ್ದಾರೆ.