ನವೀನ್‍ಚದ್ರ ಜೆ.ಶೆಟ್ಟಿ ಬೆಳ್ತಂಗಡಿ ಉಸ್ತುವಾರಿ

ಪಡುಬಿದ್ರಿ: ಮುಂಬರುವ ಲೋಕಸಭಾ ಚುನಾವಣೆ ಹಾಗೂ ಪಕ್ಷ ಸಂಘಟನೆ ಅಂಗವಾಗಿ ಕಾಪು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ಕೆಪಿಸಿಸಿ ಕೋ-ಆರ್ಡಿನೇಟರ್ ನವೀನ್‍ಚಂದ್ರ ಜೆ.ಶೆಟ್ಟಿಯವರನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತವಾರಿಯನ್ನಾಗಿ ನೇಮಕಗೊಳಿಸಲಾಗಿದೆ.

ಕಳೆದ ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಉನ್ನತ ಹುದ್ದೆಗಳನ್ನು ನಿರ್ವಹಿಸಿ ಪಕ್ಷದ ಉನ್ನತಿಗಾಗಿ ಶ್ರಮಿಸಿದ ನವೀನ್‍ಚಂದ್ರ ಜೆ.ಶೆಟ್ಟಿಯವರು ಪಕ್ಷಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್‍ರವರು ಈ ಆದೇಶ ಹೊರಡಿಸಿದ್ದು,ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪಕ್ಷದ ಮುಖಂಡರನ್ನು ಜತೆಯಾಗಿರಿಸಿಕೊಂಡು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸುವಂತೆ ತಿಳಿಸಿದ್ದಾರೆ.