Sagar Vidya Mandir team wins Taluk level Kabaddi competition for girls

Padubidri, Aug 8th, 2018:  In the Taluk level Kabaddi competition for girls held at Lions English Medium School Padubidri on Wednesday, Sagar Vidya Mandir English Medium School team has won. Girls PU college Udupi team stood second.

Full news in Kannada …..

ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ವಲಯ ಇದರ ವತಿಯಿಂದ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆ ಪಡುಬಿದ್ರಿ, ಕಂಚಿನಗರ ಇವರ ಸಹಯೋಗದೊಂದಿಗೆ ತಾಲೂಕು ಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟ ದಿನಾಂಕ: 08-08-2018 ರಂದು ಲಯನ್ಸ್ ಆಂಗ್ಲ ಮಾಧ್ಯಮ ಶಾಲೆ ಪಡುಬಿದ್ರಿ ಇಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ಸಾಗರ ವಿದ್ಯಾ ಮಂದಿರ, ಪಡುಬಿದ್ರಿ ಇವರು ಪ್ರಥಮ ಹಾಗೂ ಬಾಲಕಿಯರ ಪದವಿಪೂರ್ವ ಕಾಲೇಜು, ಉಡುಪಿ ಇವರು ದ್ವಿತೀಯ ಸ್ಥಾನವನ್ನು ಪಡೆದರು.

ಸಮಾರಂಭದ ಅಧ್ಯಕ್ಷತೆಯನ್ನು ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ಲಯನ್. ವೈ. ಗೋಪಾಲ ಶೆಟ್ಟಿಯವರು ವಹಿಸಿ, ವಿಜೇತರಿಗೆ ಬಹುಮಾನವನ್ನು ನೀಡಿದರು. ಈ ಸಂದರ್ಭದಲ್ಲಿ ದೈಹಿಕ ಪರಿವೀಕ್ಷಣಾಧಿಕಾರಿಯವರ ಆಪ್ತ ಸಹಾಯಕರಾದ ಶ್ರೀ ಸೋಮಶೇಖರ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಆಲ್ವಿನ್ ಅಂದ್ರಾದೆ, ಮುಖ್ಯೋಪಾಧ್ಯಾಯರು ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಉಡುಪಿ, ಹಿರಿಯ ದೈಹಿಕ ಶಿಕ್ಷಕರಾದ ವಿಶ್ವನಾಥ ಬಾಯಿರಿ ಹಾಗೂ ಶಿಕ್ಷಣ ಇಲಾಖೆಯ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಶ್ರೀಮತಿ. ಕವಿತರವರು ಉಪಸ್ಥಿತರಿದ್ದರು.

ಲಯನ್ಸ್ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ. ಉಷಾ ಎಂ. ರವರು ಅತಿಥಿಗಳನ್ನು ಸ್ವಾಗತಿಸಿದರು. ಶಿಕ್ಷಕಿಯರಾದ ಕು.ರೇಣುಕಾ ಕಾರ್ಯಕ್ರಮವನ್ನು ನಿರೂಪಿಸಿ, ಶ್ರೀಮತಿ ರತ್ನ ವಂದಿಸಿದರು.